ಹೋರಾಟದ ಎಚ್ಚರಿಕೆ
ಶಿವಮೊಗ್ಗ: ಕಾನೂನು ಉಲ್ಲಂಘಿಸಿದ ಕಾರಣಕ್ಕೆ ಬೀಗ ಜಡಿದಿರುವ ವೈದ್ಯಕೀಯ ಸಂಸ್ಥೆಗಳ ಪುನಾರಂಭಕ್ಕೆ ಒತ್ತಡ ಹೆಚ್ಚುತ್ತಿದ್ದು, ಜಿಲ್ಲಾಧಿಕಾರಿಯವರು ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದೆಂದು ಕನ್ನಡ ಸೈನ್ಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಜಯ ಒತ್ತಾಯಿಸಿದ್ದಾರೆ.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಮತ್ತು 2009ರ ಕಾಯ್ದೆ ಅನ್ವಯ ಜಿಲ್ಲೆಯಲ್ಲಿನ ಅನೇಕ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ಆದರೆ, ಮುಚ್ಚಿರುವ ಸಂಸ್ಥೆಗಳ ಬೀಗ ತೆಗೆಯುವಂತೆ ರಾಜಕೀಯ ಮುಖಂಡರು ಡಿಎಚ್ಓ ಅವರ ಮೇಲೆ ಒತ್ತಡ ಹೇರಲಾಗಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು, ರಾಜಕೀಯ ವ್ಯಕ್ತಿಗಳ ಮಾತಿಗೆ ಕಿವಿಗೊಡದೆ ನಕಲಿ ವೈದ್ಯರು ಸೂಕ್ತ ಶಿಕ್ಷೆಗೆ ಒಳಗಾಗುವಂತೆ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಕನ್ನಡ ಸೈನ್ಯದಿಂದ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.