ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಎಸ್‌ಎಸ್‌ಎಲ್‌ಸಿ: 25 ಸಾವಿರ ಅಭ್ಯರ್ಥಿಗಳು

Lingaraj Badiger
Updated On : 1 Apr 2013, 11:13 am

ಕ.ಪ್ರ.ವಾರ್ತೆ,ಶಿವಮೊಗ್ಗ, ಮಾ.31
ಸೋಮವಾರದಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 25 ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುತ್ತಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಯಶಸ್ವಿಯಾಗಿ ಪರೀಕ್ಷೆ ನಡೆಸಲು ಸಜ್ಜುಗೊಳಿಸಿದೆ.
ಒಟ್ಟು ವಿದ್ಯಾರ್ಥಿಗಳ ಪೈಕಿ 12,926 ಬಾಲಕ ಹಾಗೂ 12,961 ಬಾಲಕಿಯರಿದ್ದು, ಜಿಲ್ಲೆಯ ಏಳು ತಾಲೂಕುಗಳಿಂದ ಒಟ್ಟು 90 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಜಾಗೃತ ತಂಡಗಳನ್ನು ರಚಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ 7 ತಂಡ ಹಾಗೂ ತಾಲೂಕು ಮಟ್ಟದಲ್ಲಿ ಬಿಇಓ ನೇತೃತ್ವದಲ್ಲಿ 24 ಜಾಗೃತ ತಂಡ ರಚಿಸಲಾಗಿದೆ ಎಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ನೋಡಲ್ ಅಧಿಕಾರಿ ಬಿ.ಭೀಮನಗೌಡ ಮಾಹಿತಿ ನೀಡಿದ್ದಾರೆ.
ಅಗತ್ಯ ಕ್ರಮ: ಪರೀಕ್ಷೆಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಗೊಂದಲ, ಗಡಿಬಿಡಿಗೆ ಅವಕಾಶವಾಗದಂತೆ ಪರೀಕ್ಷಾ ಪ್ರಕ್ರಿಯೆ ನಡೆಸಲು ಅಗತ್ಯ ಕ್ರಮಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.
ಶಿವಮೊಗ್ಗ ತಾಲೂಕಿನಲ್ಲಿ 4 ಜಾಗೃತ ತಂಡ, ಭದ್ರಾವತಿಯಲ್ಲಿ 3, ಹೊಸನಗರ- 3, ಸೊರಬ- 3, ಸಾಗರ 3, ತೀರ್ಥಹಳ್ಳಿ 4 ಹಾಗೂ ಶಿಕಾರಿಪುರದಲ್ಲಿ 4 ಜಾಗೃತ ತಂಡ ರಚಿಸಲಾಗಿದೆ.
ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಗೌಪ್ಯ ಸಾಮಾಗ್ರಿಗಳ ವಿತರಣೆಗಾಗಿಯೇ ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ 4, ಭದ್ರಾವತಿಯಲ್ಲಿ 6, ಹೊಸನಗರ 2, ಸೊರಬ 3, ಸಾಗರ 4, ತೀರ್ಥಹಳ್ಳಿಯಲ್ಲಿ 3 ತಂಡ ಈ ಚಟುವಟಿಕೆಗಾಗಿ ಕಾರ್ಯನಿರ್ವಹಿಸುತ್ತವೆ.
200 ಮೀ. ನಿಷೇಧಾಜ್ಞೆ: ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಹಾಗೂ ಪರೀಕ್ಷಾ ಕೇಂದ್ರದ ಸುತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಸಿಬ್ಬಂದಿ, ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವುದನ್ನು ನಿಷೇಧಿಸಿದೆ.  ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಮುತ್ತಲಿರುವ ಟೈಪಿಂಗ್, ಝೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ಸಹ ನಿಷೇಧಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement