ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸರ್ಕಾರ ರಚನೆಯಲ್ಲಿ ಕೆಜೆಪಿ ನಿರ್ಣಾಯಕ

Srinivasa Murthy VN
Updated On : 3 May 2013, 12:17 pm

ಕ.ಪ್ರ.ವಾರ್ತೆ ಶಿವಮೊಗ್ಗ   ಮೇ 2
ಈ ಬಾರಿಯ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಸೇರಿದಂತೆ ಯಾವುದೇ ಪಕ್ಷಕ್ಕೆ ಬಹುಮತ ದೊರೆಯುವುದು ಅಸಾಧ್ಯ. ಈ ಹಿನ್ನೆಲೆಯಲ್ಲಿ ಕೆಜೆಪಿ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಕೆಜೆಪಿ ಪ್ರಚಾರ ಸಮಿತಿ ಅಧ್ಯಕ್ಷ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ಹೇಳಿದರು.
ನೆಲಮೂಲ- ತೃಣಮೂಲ ಅಡಿಪಾಯ ಹೊಂದಿರುವ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯಕ್ಕೆ ನ್ಯಾಯದೊರೆಯಲು ಸಾಧ್ಯವಿದೆ. ರಾಜ್ಯದಲ್ಲಿ ಕೆಜೆಪಿ ಹಾಗೂ ಬಿಎಸ್‌ಆರ್ ಕಾಂಗ್ರೆಸ್ ಮಾತ್ರ ಪ್ರಾದೇಶಿಕ ಪಕ್ಷಗಳು. ಜೆಡಿಎಸ್ ರಾಷ್ಟ್ರೀಯ ಪ್ರಾದೇಶಿಕ ಪಕ್ಷ ಎಂದು ಹೇಳಿದರು.
ಮೈತ್ರಿ: ಸುದ್ದಿಗೋಷ್ಠಿ ಮಾತನಾಡಿದ ಅವರು, ಸರ್ಕಾರ ರಚಿಸುವ ಸಂದರ್ಭದಲ್ಲಿ ಕೋಮುವಾದಿ ಪಕ್ಷ ಹೊರತುಪಡಿಸಿ ಇತರೆ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಾಗಿವೆ ಎಂದು ಅಭಿಪ್ರಾಯಪಟ್ಟರು.
ರಾಜ್ಯದ ನೆಲ, ಜಲ ಹಾಗೂ ಭಾಷೆಯ ಅಭಿವೃದ್ಧಿ ಹಾಗೂ ಸ್ವಾವಲಂಬನೆ ಸಾಧಿಸಲು ಆಯಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಸಾಧ್ಯ. ತಮಿಳುನಾಡು ಇದಕ್ಕೊಂದು ಸ್ಪಷ್ಟ ಉದಾಹರಣೆಯಾಗಿದ್ದು, ಅಲ್ಲಿನ ಪ್ರಯೋಗ ಇಲ್ಲೂ ಆಗಬೇಕಾಗಿದೆ ಎಂದು ತಿಳಿಸಿದರು.
ಕೇಂದ್ರದ ಮೇಲೆ ಒತ್ತಡ: ಪ್ರಾದೇಶಿಕ ಪಕ್ಷಗಳ ಬೆಂಬಲವಿಲ್ಲದೇ ಕೇಂದ್ರದಲ್ಲಿ ಸರ್ಕಾರ ರಚಿಸಲು ರಾಷ್ಟ್ರೀಯ ಪಕ್ಷಗಳಿಗೆ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷಗಳು ಕೇಂದ್ರದ ಮೇಲೆ ಒತ್ತಡ ಹೇರಿ ತಮ್ಮ ರಾಜ್ಯದ ಅಗತ್ಯತೆಗಳನ್ನು ಈಡೇರಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದ ಅವರು, ಕೆಜೆಪಿ ಜಾತ್ಯತೀತ ನೆಲೆಯಲ್ಲಿ ಹುಟ್ಟಿಕೊಂಡಿರುವ ಪಕ್ಷ. ಯಡಿಯೂರಪ್ಪನವರಂತಹ ದೃಢಮನಸ್ಸಿನ ನಾಯಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಹಿತಾಸಕ್ತಿಯನ್ನು ಪ್ರಬಲವಾಗಿ ಪ್ರತಿಪಾದಿಸಲು ಸಾಧ್ಯ ಎಂಬ ದೃಷ್ಟಿಯಿಂದ ತಾನು ಕೆಜೆಪಿಗೆ ಸೇರ್ಪಡೆಗೊಂಂಡಿದ್ದಾಗಿ ತಿಳಿಸಿದರು.
ಕೆಜೆಪಿ ಹಿಂದುಳಿದ ವಿಭಾಗದ ಪ್ರಮುಖರಾದ ಪರಶುರಾಮಪ್ಪ, ಯೋಗೇಶ್, ಜಯಪ್ಪ, ದಿಲೀಪ್, ಬಳ್ಳೆಕೆರೆ ಸಂತೋಷ್ ಮೊದಲಾದರು ಇದ್ದರು.

ಬಿಎಸ್‌ವೈ ಗಟ್ಟಿಪಿಂಡ
ಬೇರೆ ಯಾವುದೇ ವ್ಯಕ್ತಿಗಳು ಬಿಜೆಪಿಯಿಂದ ಹೊರಬಂದಿದ್ದರೆ ಈ ಹೊತ್ತಿಗೆ ಅವರು ನಾಪತ್ತೆಯಾಗಿರುತ್ತಿದ್ದರು  ಆದರೆ, ಯಡಿಯೂರಪ್ಪ ಗಟ್ಟಿಪಿಂಡ. ಹೀಗಾಗಿ ಎಲ್ಲರಲ್ಲೂ ಕೂಡಿಸಿಕೊಂಡು ಸಮರ್ಥವಾಗಿ ಪ್ರಾದೇಶಿಕ ಪಕ್ಷ ಕಟ್ಟಿದ್ದಾರೆ. ಪಕ್ಷದಿಂದ ನಾಡಿಗೆ ಒಳಿತಾಗುತ್ತದೆ. ಜನತೆ ಕೂಡ ಕೆಜೆಪಿಯನ್ನು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಚಂಪಾ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement