'ಜೆಡಿಎಸ್ ಜೊತೆ ಮೈತ್ರಿ ಇಲ್ಲ'
ಕ.ಪ್ರ.ವಾರ್ತೆ, ಶಿಕಾರಿಪುರ, ಮಾ.3
ಈ ಬಾರಿಯ ಚುನಾವಣೆಯಲ್ಲಿ 50 ಸಾವಿರ ಅಧಿಕ ಮತಗಳ ಅಂತರದ ಭಾರೀ ಜಯ ಸಾಧಿಸುವುದಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಶುಕ್ರವಾರ ಪಟ್ಟಣದ ಪ್ರಮುಖ ಬೀದಿಯಲ್ಲಿ ಬಾರಿ ರೋಡ್ ಶೋ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ತಾಲೂಕಿನಲ್ಲಿ ಚುನಾವಣೆಯ ಗೆಲವಿಗೆ ಪೂರಕ ವಾತಾವರಣವಿದ್ದು, ರಾಜ್ಯದ ಮುಖ್ಯಮಂತ್ರಿಯಾದ ಅವಧಿಯಲ್ಲಿ ಹಿಂದುಳಿದ, ಬಡವರ, ಅಲ್ಪಸಂಖ್ಯಾತರ ಪರವಾದ ಕಾರ್ಯದಿಂದಾಗಿ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯಾದ್ಯಂತ ಕೆಜೆಪಿ ಪರವಾಗಿ ಮತದಾರರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಕೆಜೆಪಿ ರಾಜ್ಯದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಸರ್ಕಾರ ರಚನೆಗೆ ಜೆಡಿಎಸ್ ಹಾಗೂ ಬಿಜೆಪಿ ಜತೆ ಹೊಂದಾಣಿಕೆ ಸಾಧ್ಯತೆ ತಳ್ಳಿಹಾಕಿದ ಅವರು, ಚುನಾವಣೆ ನಂತರದಲ್ಲಿ ಈ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು.
ಮಾಧ್ಯಮದಲ್ಲಿ ಕೆಜಿಪಿ ಸಾಧನೆ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಕಳೆದ ಬಾರಿಯ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಾಧ್ಯಮ ಸಮೀಕ್ಷೆ ಸಂಪೂರ್ಣ ತಪ್ಪಾಗಿದ್ದು, ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ ಆಗಲಿದೆ ಎಂದವರು ಈ ಸಂದರ್ಭದಲ್ಲಿ ಹೇಳಿದರು.