ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಹಾಸ್ಟೆಲ್‌ಗೆ ಅರ್ಜಿ ಆಹ್ವಾನ

Lingaraj Badiger
Updated On : 11 May 2013, 11:07 am

ಶಿವಮೊಗ್ಗ: ಶಿಕಾರಿಪುರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಶಿರಾಳಕೊಪ್ಪ ಮತ್ತು ಶಿಕಾರಿಪುರಗಳಲ್ಲಿ ನಡೆಯಲಿರುವ ಸರ್ಕಾರಿ ಮತ್ತು ಅನುದಾನಿತ ಮಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ 2013-14ನೇ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಇಲಾಖೆ ಶಿಕಾರಿಪುರ ಅಥವಾ ಆಯಾ ನಿಲಯದ ಮೇಲ್ವಿಚಾರಕರಿಂದ ಅಧಿಕೃತ ಅರ್ಜಿ ನಮೂನೆಯನ್ನು ಪಡೆದು ದಿನಾಂಕ ಜೂ.15ರೊಳಗೆ ಸಲ್ಲಿಸಲು ಕೋರಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗುವುದು.  2013-14ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳಿಗೆ ತಾಲೂಕು ಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪ್ರವೇಶ ನೀಡಲಾಗುವುದು.
ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಆಯಾ ವಿದ್ಯಾರ್ಥಿ ನಿಲಯಗಳಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಶಿಕಾರಿಪುರದಲ್ಲಿ...
ಶಿವಮೊಗ್ಗ: ಶಿಕಾರಿಪುರ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್‌ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಹಾಗೂ ಖಾಸಗಿ ವಿದ್ಯಾರ್ಥಿ ನಿಲಯಗಳಲ್ಲಿ 2013-14ನೇ ಸಾಲಿಗೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಸೇರಲು ಇಚ್ಫಿಸುವ ವಿದ್ಯಾರ್ಥಿಗಳು ಜೂನ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
--
ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಭದ್ರಾವತಿ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭದ್ರಾವತಿ ಮತ್ತು ಹೊಳೆಹೊನ್ನೂರಿನಲ್ಲಿ ನಡೆಯುತ್ತಿರುವ ಮಟ್ರಿಕ್ ಪೂರ್ವ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳ 5ನೇ ತರಗತಿಯಿಂದ 10ನೇ ತರಗತಿಯವರೆಗೆ 2013-14ನೇ ಸಾಲಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಇಲಾಖೆ ಭದ್ರಾವತಿ ಅಥವಾ ಆಯಾ ನಿಲಯದ ಮೇಲ್ವಿಚಾರಕರಿಂದ ಅಧಿಕೃತ ಅರ್ಜಿ ನಮೂನೆ ಪಡೆದು ಜೂ.5ರೊಳಗೆ ಸಲ್ಲಿಸಲು ಕೋರಿದೆ. ಮಾಹಿತಿಯನ್ನು ತಾ.ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement