ಪ್ರಮಾಣ ವಚನಕ್ಕೆ 1 ಸಾವಿರ ಜನ
ಶಿವಮೊಗ್ಗ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಿದ್ದರಾಮಯ್ಯ ಅವರು ಮೇ 13ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು, 13ರಂದು ಶಿವಮೊಗ್ಗ ಗ್ರಾಮಾಂತರ ಮತ್ತು ನಗರ ಕ್ಷೇತ್ರದಿಂದ ಸುಮಾರು 1 ಸಾವಿರ ಜನ ತೆರಳುವರು. ಈ ಸಂದರ್ಭದಲ್ಲಿ ಕಾಂಗ್ರೆಸ್ನ ಎಸ್ಸಿ ವಿಭಾಗದ ಕಾರ್ಯಕರ್ತರು ಸ್ವಯಂಪ್ರೇರಣೆಯಿಂದ ಬೆಂಗಳೂರನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ಜಿಲ್ಲಾಧ್ಯಕ್ಷ ಎಂ.ಎಸ್. ಸಿದ್ದಪ್ಪ ಅವರು ಈ ಸಂದರ್ಭದಲ್ಲಿ ಕೋರಿದ್ದಾರೆ.