ಅರ್ಜಿ ಆಹ್ವಾನ...
ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭದ್ರಾವತಿ ತಾಲೂಕಿನಲ್ಲಿ ಬಿಸಿಎಂ ಇಲಾಖೆಯಿಂದ ನಡೆಸುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಖಾಸಗಿ ಅನುದಾನಿತ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2012-13ನೇ ಸಾಲಿಗೆ ಖಾಲಿ ಇರುವ ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭದ್ರಾವತಿ ಟೌನ್ ದೂಣಭಘಟ್ಟ ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿ ನಿಲಯ, ಸೀತಾರಾಂಪುರ, ಕಲ್ಲಿಹಾಳ್ ಹಾಗೂ ಹುಣಸೇಕಟ್ಟೆಗಳಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯ, ಹೊಳೆಹೊನ್ನೂರನಲ್ಲಿರುವ ಕನಕದಾಸ ಖಾಸಗಿ ಅನುದಾನಿತ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು 5 ರಿಂದ 10ನೇ ತರಗತಿಯವರೆಗೆ ಮಾತ್ರ ವ್ಯಾಸಂಗ ಮಾಡುವವರಾಗಿರಬೇಕು. ಎಸ್‌ಸಿ, ಎಸ್‌ಟಿ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿರಬೇಕು. ಎಸ್‌ಸಿ, ಎಸ್‌ಟಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ ರು. 2 ಲಕ್ಷವಾರ್ಷಿಕ ಆದಾಯದ ಮಿತಿ 1 ಲಕ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ 44,500 ಕ್ಕಿಂತ ಕಡಿಮೆ ಇರಬೇಕು.ಅಧಿಕೃತ ಅರ್ಜಿ ನಮೂನೆಯನ್ನು ಪಡೆದು ದಿನಾಂಕ ಜೂ.10ರೊಳಗೆ ಸಲ್ಲಿಸಲು ಕೋರಿದೆ.