ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕನ್ನಡ ಸಾಹಿತ್ಯ ಸಮ್ಮೇಳನ

Mainashree
Updated On : 17 May 2013, 11:07 am

ಶಿವಮೊಗ್ಗ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯ ಪರಿಷತ್ ಸಿದ್ಧತೆ ನಡೆಸುತ್ತಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ ಮಾಡಲಾಯಿತು.
 ಸಮ್ಮೇಳನಾಧ್ಯಕ್ಷರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಸರ್ವಾನುಮತದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ. 26ರಂದು ನಡೆಯಲಿರುವ ಶಿಕಾರಿಪುರ ತಾಲೂಕು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ.ಸ. ಉಷಾ ಅವರನ್ನು, 28ರಂದು ನಡೆಯುವ ಸಾಗರ ತಾಲೂಕು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎನ್. ಹುಚ್ಚಪ್ಪ ಮಾಸ್ತರ್ ಅವರನ್ನು, ಜೂನ್ 9ರಂದು ನಡೆಯುವ ಹೊಸನಗರ ತಾಲೂಕು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಎಸ್.ಪಿ. ಪದ್ಮಪ್ರಸಾದ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
 ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ 10ರಂದು ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನಾಧ್ಯಕ್ಷರ ಆಯ್ಕೆಗೆ ವಿವಿಧ ತಾಲೂಕು ಅಧ್ಯಕ್ಷರು ತಮ್ಮ ತಾಲೂಕಿನಲ್ಲಿರುವ ಅರ್ಹ ಐದರಿಂದ ಆರು ಹೆಸರನ್ನು ಜಿಲ್ಲಾ ಕಾರ್ಯಕಾರಿ ಸಮಿತಿಗೆ ಒದಗಿಸಿದ್ದು ಅವರಲ್ಲಿ ಒಬ್ಬರನ್ನು ಆರಿಸಲಾಗಿದೆ ಎಂದಿದ್ದಾರೆ.
ಕೆಲವು ತಾಲೂಕು ಸಮಿತಿ ಸದಸ್ಯರು ನಿಷ್ಕ್ರೀಯವಾಗಿದ್ದು ಅಂತಹ ಸಮಿತಿಯನ್ನು ಬದಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು. ರಾಜಿನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನವನ್ನ ಬದಲಿಸಿ ಬೇರೆ ಆಸಕ್ತರನ್ನು ನೇಮಿಸಲು ನಿಬಂಧನೆಯಂತೆ ಕ್ರಮ ಕೈಗೊಳ್ಳಲು ಸಭೆ ತೀರ್ಮಾನಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement