ನಾಳೆ ಕೆಜೆಪಿ ಕಾರ್ಯಕರ್ತರ ಸಮಾವೇಶ
ಶಿವಮೊಗ್ಗ: ಕರ್ನಾಟಕ ಜನತಾ ಪಕ್ಷ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಸಮಿತಿಯು ಮೇ 18ರಂದು ಬೆಳಗ್ಗೆ 10 ಘಂಟೆಗೆ ನಗರದ ದೈವಜ್ಞ ಕಲ್ಯಾಣ ಮಂದಿರದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗಿದೆ.
ಕೆಜೆಪಿ ರಾಜ್ಯ ಕಾರ್ಯದರ್ಶಿ ಅನಂತರಾಮ್, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಕೆ.ಪಿ. ಪುರುಷೋತ್ತಮ್, ರಾಜ್ಯ ಉಪಾಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಜಿಲ್ಲಾ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್, ಮುಖಂಡರಾದ ಎಸ್. ರುದ್ರೇಗೌಡ, ಟಿ.ಡಿ. ಮೇಘರಾಜ್, ಮಾಜಿ ಸಚಿವರಾದ ಜಿ. ಬಸವಣ್ಯಪ್ಪ, ಕ್ಷೇತ್ರ ಸಮಿತಿ ಅಧ್ಯಕ್ಷ ಜಿ. ಸದಾಶಿವಪ್ಪ ಗೌಡ ಹಾಗೂ ಜಿಲ್ಲಾ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಬಿ.ಹೆಚ್. ರಾಮಚಂದ್ರ ಹಾಗೂ ಎಸ್. ಹಾಲಸ್ವಾಮಿ ಹೇಳಿದ್ದಾರೆ.