ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾಗೋಡುಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Mainashree
Updated On : 18 May 2013, 12:02 pm

ಶಿವಮೊಗ್ಗ: ಕಾಗೋಡು ತಿಮ್ಮಪ್ಪರಿಗೆ ಸಚಿವ ಸ್ಥಾನ ನೀಡುವಂತೆ ಪಕ್ಷದ ವರಿಷ್ಠರನ್ನು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಗೋಪಿ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಅವರನ್ನು ವಿಧಾನಸಭೆ ಸ್ಪೀಕರ್ ಹುದ್ದೆಗಿಂತ ಸಂಪುಟ ಸಚಿವರಾಗಿ ನೇಮಕ ಮಾಡಬೇಕು. ಅವರ ಸೇವೆಯನ್ನು ರಾಜ್ಯ ಸರ್ಕಾರ ಬಳಸಿಕೊಳ್ಳಬೇಕು ಎಂಬುದು ಅವರ ಒತ್ತಾಯವಾಗಿತ್ತು.
ಪ್ರತಿಭಟನಾ ಪ್ರದರ್ಶನದಲ್ಲಿ ಪ್ರಮುಖರಾದ ಕೆ. ದೇವೇಂದ್ರಪ್ಪ ಸೇರಿದಂತೆ ಹಲವರು ಇದ್ದರು.
ಒತ್ತಾಯ: ಸರಳ, ಸಜ್ಜನ, ಧೀಮಂತ ನಾಯಕ ಕಾಗೋಡು ತಿಮ್ಮಪ್ಪ ಅವರು ಸಾಗರ ಕ್ಷೇತ್ರದಿಂದ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆಯಾಗಿ ಶಾಸಕರಾಗಿದ್ದು, ಅವರನ್ನು ಸಚಿವರನ್ನಾಗಿ ನೇಮಕ ಮಾಡುವಂತೆ ಜಿಲ್ಲಾ ಆರ್ಯ ಈಡಿಗ ಸಂಘದ ಅಧ್ಯಕ್ಷ ಆರ್. ಶ್ರೀಧರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
40 ವರ್ಷಗಳಿಂದ ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಹೋರಾಟಗಳನ್ನು ಮಾಡುವ ಮೂಲಕ ಜನಸಾಮಾನ್ಯರ ನಡುವೆ ಜನನಾಯಕರಾಗಿ ಬೆಳೆದು ಬಂದಿದ್ದಾರೆ. ಇವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement