ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

Mainashree
Updated On : 18 May 2013, 12:03 pm

ಸಾಗರ: ಸರ್ಕಾರದಲ್ಲಿ ಇಲ್ಲಿನ ಶಾಸಕ ಕಾಗೋಡು ತಿಮ್ಮಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಸಾಗರ ಹೋಟೆಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಮಾಡಿದರು.
 ಕಾಗೋಡು ಪರ ಘೋಷಣೆ ಕೂಗಿದ ಕಾರ್ಯಕರ್ತರು ಅವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳು ಸಾಮೂಹಿಕ ರಾಜಿನಾಮೆ ನೀಡುವುದಾಗಿ ಅವರು ಘೋಷಿಸಿದರು.
ಟೈರಿಗೆ ಬೆಂಕಿ: ಆಕ್ರೋಶಗೊಂಡ ಪಕ್ಷದ ಕಾರ್ಯಕರ್ತರು ಸಾಗರದ ಮುಖ್ಯ ಬಸ್ ನಿಲ್ದಾಣದಲ್ಲಿ ಟೈರಿಗೆ ಬೆಂಕಿ ಹಚ್ಚುವ ಮೂಲಕ ಪ್ರತಿಭಟನೆ ನಡೆಸಿ, ಸ್ವಲ್ಪಕಾಲ ರಸ್ತೆ ತಡೆ ನಡೆಸಿದರು. ಪಕ್ಷದ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಆರ್ಯ ಈಡಿಗರ ಸಂಘದ ಒತ್ತಾಯ: ಅನುಭವಿ ರಾಜಕಾರಣಿ ಕಾಗೋಡು ತಿಮ್ಮಪ್ಪನವರಿಗೆ ರಾಜ್ಯ ಸಂಪುಟದಲ್ಲಿ ಪ್ರಮುಖ ಸಚಿವ ಸ್ಥಾನ ನೀಡುವಂತೆ ಪ್ರಾಂತ್ಯ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ.
 ಅವರು ಹಿಂದಿನ ಸರ್ಕಾರಗಳಲ್ಲಿ ಹಲವಾರು ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಜೊತೆಗೆ, ವಹಿಸಿಕೊಂಡ ಎಲ್ಲಾ ಖಾತೆಗಳಿಗೂ ನ್ಯಾಯ ಒದಗಿಸಿದ್ದಾರೆ. ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದೆ ಎಂದು ಸಂಘ ಹೇಳಿದೆ.
 ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಗೋಡು ತಿಮ್ಮಪ್ಪನವರು ಸಚಿವರಾಗುವ ತುರ್ತು ಅಗತ್ಯವಿದೆ. ಕಾಗೋಡು ತಿಮ್ಮಪ್ಪ ಜಯಗಳಿಸಿದ್ದರಿಂದ ಸಾಗರ ಕ್ಷೇತ್ರ ಹಾಗೂ ಶಿವಮೊಗ್ಗ ಜಿಲ್ಲೆಯ ಮತದಾರರು ಅಭಿವೃದ್ಧಿಯ ಅನೇಕ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ಅವರಿಗೆ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ನೀಡುವ ಮೂಲಕ ಜನರ ಆಶಯವನ್ನು ಈಡೇರಿಸಬೇಕು ಎಂದು ಸಂಘದ ಅಧ್ಯಕ್ಷ ಬಿ.ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಂ.ಸಿ. ಪರಶುರಾಮಪ್ಪ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement