ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವಸ್ತು ಸಂಗ್ರಹಾಲಯ ಸಪ್ತಾಹ ರಾಜ್ಯಾದ್ಯಂತ

Vishwanath S
Updated On : 19 May 2013, 1:14 am

ಶಿವಮೊಗ್ಗ: ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಮೇ 18ರಿಂದ 24ರ ವರೆಗೆ ರಾಜ್ಯದಾದ್ಯಂತ ವಸ್ತು ಸಂಗ್ರಹಾಲಯ ಸಪ್ತಾಹವನ್ನು ಆಚರಿಸಲಿದೆ. ಈ ಸಪ್ತಾಹದ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ಐತಿಹಾಸಿಕ, ಪಾರಂಪರಿಕ ಮಹತ್ವದ ಪ್ರಾಚೀನ ವಸ್ತುಗಳನ್ನ್ನು ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಂಡಿದೆ. ಪ್ರಾಚೀನ ವಸ್ತುಗಳು ಕಂಡುಬಂದಲ್ಲಿ ಸಾರ್ವಜನಿಕರು ಸಹಾಯಕ ನಿರ್ದೇಶಕರು, ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸರ್ಕಾರಿ ವಸ್ತು ಸಂಗ್ರಹಾಲಯ, ಶಿವಪ್ಪನಾಯಕ ಅರಮನೆ, ಕೋಟೆ ರಸ್ತೆ, ಶಿವಮೊಗ್ಗ, ದೂರವಾಣಿ ಸಂಖ್ಯೆ 08182 221992 ಸಂಪರ್ಕಿಸಬಹುದು.

ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಉದ್ಯೋಗ ಮತ್ತು ತರಬೇತಿ ಇಲಾಖೆಯು ತೀರ್ಥಹಳ್ಳಿ ತಾಲೂಕು ಕುರುವಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ರೀತಿಯ 6 ವೃತ್ತಿ ತರಬೇತಿಗಳಿಗೆ ಆನ್‌ಲೈನ್ ಮುಖಾಂತರ ಪ್ರಸಕ್ತ ಸಾಲಿನ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2 ವರ್ಷಗಳ ಅವಧಿಯ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್‌ಫಾರ್ಮೆಷನ್ ಟೆಕ್ನಾಲಜಿ ಮತ್ತು ಎಲೆಕ್ಟ್ರಾನಿಕ್ ಸಿಸ್ಟಂ ಮೆಂಟೇನೆನ್ಸ್ ಹಾಗೂ ಒಂದು ವರ್ಷ ಅವಧಿಯ ಐಡಿಡಿ ಮತ್ತು ಡ್ರೆಸ್ ಮೇಕಿಂಗ್ ತರಬೇತಿಗೆ ಪ್ರವೇಶಾವಕಾಶವಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮೇ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗಾಗಿ ಅಂತಜಾಲ ತಾಣ www.emptrg.kar.nic.in @ ಅಥವಾ www.det.karnataka.org.in ವೀಕ್ಷಿಸುವಂತೆ ಕೇಂದ್ರದ ಪ್ರಾಚಾರ್ಯರು ತಿಳಿಸಿದ್ದಾರೆ.

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಜಿಲ್ಲೆಯ ಅನುದಾನಿತ ಅಥವಾ ಸಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಸಕ್ತ ಸಾಲಿನ ಪ್ರಥಮ ಡಿಪ್ಲೋಮಾ ವ್ಯಾಸಂಗ ಮಾಡಲು ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ನಿಗದಿತ ಅರ್ಜಿ ಮತ್ತು ಮಾಹಿತಿ ಪುಸ್ತಕವನ್ನು ಪಡೆಯುವ ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳು 50 ಹಾಗೂ ಸಾಮಾನ್ಯ ಅಭ್ಯರ್ಥಿಗಳು 100 ಅರ್ಜಿ ಶುಲ್ಕವನ್ನು ಯಾವುದೇ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಾವತಿಸಿ, ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮೇ 26ರೊಳಗಾಗಿ ಸಲ್ಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement