ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಚಿವ ಸ್ಥಾನಕ್ಕಾಗಿ ಮೋಟಮ್ಮ ಗರಂ

Vishwanath S
Updated On : 19 May 2013, 1:09 am

ಚಿಕ್ಕಮಗಳೂರು: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್ ಜನ್ಮ ನೀಡಿದ್ದ ಚಿಕ್ಕಮಗಳೂರು ಜಿಲ್ಲೆಯನ್ನು ಸಿದ್ದು ಸಂಪುಟದಲ್ಲಿ ಕಡೆಗಣಿಸಲಾಗಿದೆ. ಒಂದೇ ಮಾತಿನಲ್ಲಿ ಹೇಳುವುದಾದರೆ, ಕಾಫಿಯ ತವರೂರು ಕಾಂಗ್ರೆಸ್ ಪಾಲಿಗೆ ಆಟಕ್ಕೂ ಇಲ್ಲ ಲೆಕ್ಕಕ್ಕೂ ಇಲ್ಲದಂತಾಗಿದೆ.  ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಕಳೆದ ಏಪ್ರಿಲ್ 27 ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಚಿಕ್ಕಮಗಳೂರು ಜಿಲ್ಲಾ ಕೇಂದ್ರಕ್ಕೆ ಬಂದು ಅಭ್ಯರ್ಥಿಗಳ ಪರ ಭಾಷಣ ಮಾಡುವ ಆರಂಭದಲ್ಲಿ ಅತ್ತೆಯವರಿಗೆ ರಾಜಕೀಯ ಪುನರ್ ಜನ್ಮ ನೀಡಿರುವ ಈ ಜಿಲ್ಲೆಯನ್ನು ಕಾಂಗ್ರೆಸ್ ಪಕ್ಷ ಯಾವತ್ತೂ ಮರೆಯುವುದಿಲ್ಲ. ಈ ಜಿಲ್ಲೆಗೆ ನಮ್ಮ ಹೃದಯದಲ್ಲಿ ಸ್ಥಾನ ನೀಡಲಾಗಿದೆ ಎಂದು ಹೇಳುವ ಮೂಲಕ ಇಂದಿರಾಗಾಂಧಿಯವರನ್ನು ನೆನಪು ಮಾಡಿಕೊಂಡಿದ್ದರು. ಆದರೆ, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಹಾಗಾದರೆ, ಇಲ್ಲಿರುವ ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯರಿಗೆ, ಕಾಂಗ್ರೆಸ್‌ನ ಶಾಸಕರಿಗೆ ಅರ್ಹತೆ ಇಲ್ಲವೆ ಎಂಬ ಪ್ರಶ್ನೆ ಜನರ ಮುಂದೆ ಎದುರಾಗಿದೆ.  ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ವಿಧಾನಪರಿಷತ್ ಸದಸ್ಯರು ಹಾಗೂ ಓರ್ವರು ಶಾಸಕರು ಇದ್ದಾರೆ. ಈ ಪೈಕಿ ಮೋಟಮ್ಮ ಒಬ್ಬರು. ಅವರು ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ನಂತರದಲ್ಲಿ ವಿಧಾನಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕಿಯಾಗಿದ್ದರು. ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದ ಮೋಟಮ್ಮ ಅವರ ಕನಸಿಗೆ ಕಾಂಗ್ರೆಸ್ ತಣ್ಣಿರು ಎರಚಿದೆ ಎಂದು ಮುಖಂಡರ ವಿರುದ್ಧ ಗರಂ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement