ಕಾಗೋಡುಗೆ ತಾಪಂನಿಂದ ಸನ್ಮಾನ
ಸಾಗರ: ಅಧಿಕಾರ ದೊರೆತಾಗ ಜನರಿಗೆ ನ್ಯಾಯ ಒದಗಿಸಲು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಶಾಸಕ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ತಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದ ವತಿಯಿಂದ ನೀಡಿದ ಸನ್ಮಾನ ಸ್ವೀಕರಿಸಿ, ಜನರ ನಿರೀಕ್ಷೆ ಬಹಳಷ್ಟು ಇದೆ. ಅದನ್ನು ಮುಟ್ಟಲು ಶಕ್ತಿಮೀರಿ ಕೆಲಸ ಮಾಡಬೇಕು ಎಂದರು.
ತಾಪಂ ಅಧ್ಯಕ್ಷ ಮಹಾಬಲೇಶ್ವರ ಕುಗ್ವೆ, ಉಪಾಧ್ಯಕ್ಷೆ ಗೌರಮ್ಮ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸುಮಂಗಲ ರಾಮಕೃಷ್ಣ, ಲಲಿತಾ ನಾರಾಯಣ್, ಪದ್ಮಾವತಿ ಚಂದ್ರಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ.ಸದಾಶಿವ, ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.