ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಚಿವ ಸ್ಥಾನಕ್ಕೆ ಆಗ್ರಹಿಸಿ ಡಿಕೆಶಿ ಬೆಂಬಲಿಗರಿಂದ ಪ್ರತಿಭಟನೆ

Rashmi Kasaragodu
Updated On : 21 May 2013, 11:28 am

ಶಿವಮೊಗ್ಗ: ಡಿ.ಕೆ. ಶಿವಕುಮಾರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಡಿಕೆಶಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಮೂಲಕ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಪಕ್ಷದ ಕೇಂದ್ರ ಸಮಿತಿಗೆ ಮನವಿ ಸಲ್ಲಿಸಿದರು.
   6 ಬಾರಿ ಶಾಸಕರಾಗಿ, 2 ಬಾರಿ ಸಚಿವರಾಗಿ, ಎನ್‌ಎಸ್‌ಯುಐ, ಯುವ ಕಾಂಗ್ರೆಸ್, ಕೆಪಿಸಿಸಿಯಲ್ಲಿ ಪದಾಧಿಕಾರಿಯಾಗಿ ಸುಮಾರು 32 ವರ್ಷ ಕಾಂಗ್ರೆಸ್ ಪಕ್ಷದ ಸಂಘಟನೆಗೆ ದುಡಿದಿರುವ ಡಿಕೆಶಿ, ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರನ್ನು ನಿರ್ಲಕ್ಷಿಸಿರುವುದು ಸರಿಯಲ್ಲ ಎಂದು ಮನವಿಯಲ್ಲಿ ವಿವರಿಸಲಾಗಿದೆ.
ಅಸಮಧಾನ: ಡಿಕೆಶಿಯವರು ಒಕ್ಕಲಿಗರ ನಾಯಕರಲ್ಲದೇ, ಎಲ್ಲಾ ಸಮಾಜದ ಯುವಕರಿಗೆ ರಾಜಕೀಯವಾಗಿ ಮಾರ್ಗದರ್ಶಕರಾಗಿದ್ದು ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದು ಪಕ್ಷದ ದೌರ್ಭಾಗ್ಯ ಸ್ಥಿತಿಯನ್ನು ತೋರಿಸುತ್ತದೆ ಎಂದು ಧರಣಿ ನಿರತರು ಅಸಮಾಧಾನ ವ್ಯಕ್ತಪಡಿಸಿದರು.
ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಈ ನಿಟ್ಟಿನಲ್ಲಿ ಸಭೆ ನಡೆಸಬೇಕು, ಕ್ಯಾಬಿನೆಟ್‌ನಲ್ಲಿ ಡಿಕೆಶಿ ಅವರಿಗೆ ಸ್ಥಾನ ನೀಡಿ ಪಕ್ಷದ ಸಂಘಟನೆ ಬಲಪಡಿಸಲು ಅವಕಾಶ ಮಾಡಿಕೊಡಬೇಕೆಂದು ಧರಣಿ ನಿರತರು ಮನವಿ ಮಾಡಿದ್ದಾರೆ.
   ಲೋಕಸಭೆ ಚುನಾವಣೆ ಸಮೀಪವಿದ್ದು, ಡಿಕೆಶಿಗೆ ಸ್ಥಾನ ನೀಡುವುದರಿಂದ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬಹುದು.
  ಒಂದು ವೇಳೆ ಸಚಿವ ಸ್ಥಾನ ನೀಡದೇ ಇದ್ದರೇ ಮುಂದಿನ ದಿನಗಳಲ್ಲಿ ನಿರಂತರವಾಗಿ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಪಕ್ಷದ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement