ಹಾವು ಕಡಿದು ಕಾಲೇಜು ವಿದ್ಯಾರ್ಥಿನಿ ಸಾವು
ಸಾಗರ: ಪರೀಕ್ಷೆಗಾಗಿ ಓದುತ್ತಾ ಕುಳಿತಿದ್ದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಥಮ ಬಿ.ಎ. ವಿದ್ಯಾರ್ಥಿನಿ ಸುಮ (19) ಮೃತ ವಿದ್ಯಾರ್ಥಿನಿ.
ತಾಲೂಕಿನ ಕಟ್ಟಿನಕಾರು ಗ್ರಾಮದ ಹಾಲೆಮನೆ ಗ್ರಾಮದವಳಾದ ಸುಮಾ ಬಿಸಿಎಂ ಹಾಸ್ಟೆಲ್ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳು ಎನ್ನಲಾಗಿದೆ. ಸಹಾಸ್ಟೆಲ್ ಎದುರಿನ ಗಾರ್ಡ್ನ್ನಲ್ಲಿ ಓದುತ್ತಾ ಕುಳಿತಿದ್ದಳು. ಈ ಸಂದರ್ಭದಲ್ಲಿ ಕಾಣಿಸಿಕೊಂಡ ನಾಗರ ಹಾವು ಕಚ್ಚಿದೆ ಎಂದು ಅಕ್ಕಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಸಾವನ್ನಪ್ಪಿದ್ದಳು.