ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ತಾಲೂಕಿನ ಅಭಿವೃದ್ಧಿ ಕೆಲಸಗಳ ಚರ್ಚೆ

Rashmi Kasaragodu
Updated On : 22 May 2013, 11:25 am

ಕ.ಪ್ರ.ವಾರ್ತೆ ಟಿ ಸೊರಬ ಟಿ  ಮೇ 21
ಕ್ಷೇತ್ರದ ಶಾಸಕ ಮಧುಬಂಗಾರಪ್ಪ ಮಂಗಳವಾರ ಮೊದಲ ಸಭೆ ನಡೆಸಿದ್ದು, ತಾಲೂಕಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಭೆ ಸೇರಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಮಾಹಿತಿ ಸಂಗ್ರಹಣೆ, ಅಭಿವೃದ್ಧಿ ಕಾರ್ಯಗಳ ಬೆಳವಣಿಗೆ, ಆಗಬೇಕಿರುವ ಕಾರ್ಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಮುಂಗಾರು ಆಗಮಿಸುವ ಎಲ್ಲ ಸೂಚನೆಗಳು ಇರುವ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳೊಂದಿಗೆ ಇಲಾಖೆಯ ಮಾಹಿತಿ ಪಡೆದ ಅವರು ಸಮರ್ಪಕ ಅವಧಿಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಒದಗಿಸಿಕೊಡಬೇಕು ಎಂದು ತಿಳಿಸಿದರು.
ಶಾಲಾ ಕಾಲೇಜು ಪ್ರಾರಂಭವಾಗುತ್ತಿರುವುದರಿಂದ ಮಕ್ಕಳಿಗೆ ಅಗತ್ಯವಿರುವ ಹಾಸ್ಟೆಲ್ ಇತ್ಯಾದಿ ಸೌಲಭ್ಯಗಳು ದೊರಕುವ ಏರ್ಪಾಟಾಗಲಿ, ತಾಲೂಕಿನ ಅಗತ್ಯವಿರುವ ಶಾಲೆಗಳಲ್ಲಿ ಕುಡಿಯುವ ನೀರಿನ ಖಾಯಂ ವ್ಯವಸ್ಥೆಗಾಗಿ ಯೋಜನೆಗಳನ್ನು ರೂಪಿಸಿ, ಗುಣಮಟ್ಟದ ಶಿಕ್ಷಣಕ್ಕಾಗಿ ಶಿಕ್ಷಣ ಇಲಾಖೆಯ ಶ್ರಮವಿರಲಿ ಎಂದು ಬಿಇಒ ಅವರಿಗೆ ಸೂಚಿಸಿದರು.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಂಡಿದ್ದು, ತುರ್ತು ಕ್ರಮ ಕೈಗೊಳ್ಳಬೇಕು, ವೈದ್ಯರ ಸಮಸ್ಯೆ ಇರುವ ಆಸ್ಪತ್ರೆಗಳ ವಿವರ ನೀಡಬೇಕು ಎಂದ ಅವರು ಲೋಕೋಪಯೋಗಿ ಇಲಾಖೆಯ ಕಾರ್ಯ ಚಟುವಟಿಕೆಗಳ ಸಂಪೂರ್ಣ ವಿವರ ಪಡೆದರು. ಪಟ್ಟಣ ಮುಖ್ಯ ರಸ್ತೆ ಅಗಲೀಕರಣದ ವಿಚಾರದಲ್ಲಿ ನಿವಾಸಿಗರಿಗೆ ಯೋಗ್ಯ ಪರಿಹಾರ ಒದಗಿಸಿ ರಸ್ತೆ ಅಭಿವೃದ್ಧಿಗೊಳಿಸುವಲ್ಲಿ ತಾವು ಬದ್ಧವಿರುವುದಾಗಿ ತಿಳಿಸಿದರು.
ತಹಸೀಲ್ದಾರ್ ತೇಜಸ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಎಲ್ಲ ಅಧಿಕಾರಿಗಳು, ತಾಪಂ ಅಧ್ಯಕ್ಷ ಸದಾನಂದಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement