ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಎಎಫ್-11 ಫೀಡರ್‌ಗೆ ಸಂಬಂಧಿಸಿದಂತೆ ಪ್ರದೇಶಗಳಲ್ಲಿ 11 ಕೆವಿ ಮಾರ್ಗದ ತುರ್ತು ನಿರ್ವಹಣೆ ಕಾರ್ಯ ಇರುವ ಕಾರಣ ವಿದ್ಯುತ್ ಕಡಿತ ಅವಶ್ಯವಾಗಿದ್ದು, ಮೇ 23 ಹಾಗೂ 24ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಶಿವಮೊಗ್ಗ ನಗರ ವ್ಯಾಪ್ತಿಯ ಹೊಸಮನೆ,
ಶರಾವತಿ ನಗರ ಹಾಗೂ ವಿನೋಬ ನಗರ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ನಗರ ಉಪವಿಭಾಗ 1ರ ಸಹಾಯಕ ಕಾರ್ಯನಿರ್ವಾಹರ ಎಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ: ಉತ್ತಮ ಫಲಿತಾಂಶ
ಶಿವಮೊಗ್ಗ: ನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಪವನ್ ಎನ್‌ಜಿಪಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 610 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈತ ಸರ್ಕಾರಿ ನೌಕರರ ಸಹಕಾರ ಸಂಘದ ಕಾರ್ಯದರ್ಶಿ ಪ್ರಸನ್ನ ಎನ್‌ಜಿಪಿ ಅವರ ಪುತ್ರ.