ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಶೈಕ್ಷಣಿಕ ಯೋಜನೆಗಳು ಸದುಪಯೋಗವಾಗಲಿ'

Rashmi Kasaragodu
Updated On : 23 May 2013, 10:58 am

ಕ.ಪ್ರ.ವಾರ್ತೆ ಟಿ ಭದ್ರಾವತಿ ಟಿ  ಮೇ 22
ಸರ್ವರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಗ್ರಾಮೀಣ ಮಟ್ಟದ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕೊಠಡಿಗಳು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಸರ್ವಶಿಕ್ಷಾ ಅಭಿಯಾನ ಕಾರ್ಯಕ್ರಮದ ಯೋಜನೆಯಡಿ ಕಲ್ಪಿಸಿಕೊಡುತ್ತಿದೆ ಎಂದು ಭದ್ರಾವತಿಯ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ಬಿಎಡ್ ಕಾಲೇಜು ಪ್ರಾಚಾರ್ಯ ಕೆ. ನಿಂಗಪ್ಪ ತಿಳಿಸಿದರು.
ಭಾರತ ಸರ್ಕಾರದ ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಶಿವಮೊಗ್ಗ ಘಟಕ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಹಾಗೂ ವಿಶ್ವೇಶ್ವರಾಯ ಬಿಎಡ್ ಕಾಲೇಜುಗಳ ಆಶ್ರಯದಲ್ಲಿ ವಿಶ್ವೇಶ್ವರಾಯ ಬಿಎಡ್ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸರ್ವ ಶಿಕ್ಷಾ ಅಭಿಯಾನ ವಿಶೇಷ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕಲ್ಪಿಸಲು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು. ಗಂಡು ಹಾಗೂ ಹೆಣ್ಣು ಎನ್ನು ಭೇದಭಾವನ್ನು ತೊರೆದು ಪ್ರತಿಯೊಬ್ಬರಿಗೂ ಉನ್ನತ ಶಿಕ್ಷಣ ಕೊಡಿಸಿ ಜ್ಞಾನವಿಕಾಸಕ್ಕೆ ಮುನ್ನುಡಿ ಬರೆಯಬೇಕೆಂದು ಅವರು ಹೇಳಿದರು.
ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ಶಿವಲಿಂಗೇಗೌಡ, ಮನೆಯೇ ಮೊದಲ ಪಾಠಶಾಲೆ ಮತ್ತು ತಾಯಿಯೇ ಮೊದಲ ಗುರುವಾಗಿರುವುದರಿಂದ ಗ್ರಾಮ ಮಟ್ಟದ ತಾಯಂದಿರು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದರು.
ಕ್ಷೇತ್ರ ಪ್ರಚಾರ ಅಧಿಕಾರಿ ಜಿ. ತುಕಾರಾಮ್‌ಗೌಡ ಕಾರ್ಯಕ್ರಮದ ಉದ್ದೇಶ ಹಾಗೂ ಪ್ರಾಮುಖ್ಯತೆಯನ್ನು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement