ಉತ್ತಮ ಫಲಿತಾಂಶ
ಶಿವಮೊಗ್ಗ- ನಗರದ ಮೇರಿ ಇಮ್ಯಾಕುಲೇಟಟ್ಪ್ರೌಢಶಾಲೆಯ ವಿದ್ಯಾರ್ಥಿನಿ ಊರ್ಮಿಳಾ ಎಸ್. ಅವರು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಅಂಕದೊಂದಿಗೆ ಉತ್ತಮ ಫಲಿತಾಂಶ ಪಡೆದಿದ್ದಾರೆ. ಇವರು ನಗರದ ಬಿ.ವಿ. ಶ್ರೀನಿವಾಸ್ ಹಾಗೂ ಶಶಿಕಲಾ ಅವರ ಪುತ್ರಿ.
ಕೆಬಿಪಿಗೆ ಸನ್ಮಾನ
ಶಿವಮೊಗ್ಗ- ನೂತನ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರಿಗೆ ನಗರ ಉತ್ತರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವಮಿತಿ ವತಿಯಿಂದ ಮೇ 25ರ ಬೆಳಿಗ್ಗೆ 10.30ಕ್ಕೆ ಸನ್ಮಾನ ಕಾರ್ಯಕ್ರಮವನ್ನು ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದೆ. ಸಚಿವ ಕಿಮ್ಮನೆ ರತ್ನಾಕರ್, ಹಿರಿಯ ನಾಯಕ ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.