ಎಸ್ಸೆಸ್ಸೆಲ್ಸಿ ಪರೀಕ್ಷೆ ಉತ್ತಮ ಫಲಿತಾಂಶ
ಶಿವಮೊಗ್ಗ: ನಗರದ ಮೇರಿ ಇಮ್ಯಾಕುಲೇಟಟ್ಪ್ರೌಢಶಾಲೆಯ ವಿದ್ಯಾರ್ಥಿನಿ ಊರ್ಮಿಳಾ ಎಸ್. ಅವರು ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.97 ಅಂಕದೊಂದಿಗೆ ಉತ್ತಮ ಫಲಿತಾಂಶ ಪಡೆದಿದ್ದಾರೆ.
ಕೆಬಿಪಿಗೆ ಸನ್ಮಾನ
ಶಿವಮೊಗ್ಗ: ನೂತನ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರಿಗೆ ನಗರ ಉತ್ತರ ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವಮಿತಿ ವತಿಯಿಂದ ಮೇ 25ರ ಬೆಳಿಗ್ಗೆ 10.30ಕ್ಕೆ ಸನ್ಮಾನ ಕಾರ್ಯಕ್ರಮವನ್ನು ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಿದೆ. ಸಚಿವ ಕಿಮ್ಮನೆ ರತ್ನಾಕರ್, ಹಿರಿಯ ನಾಯಕ ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ರುದ್ರೇಶ್ ತಿಳಿಸಿದ್ದಾರೆ.
ನೋಂದಣಿ ಘಟಕ
ಶಿವಮೊಗ್ಗ: ನಗರದ ಕಲಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ಫ್ಯಾಷನ್ ಟೆಕ್ನಾಲಜಿ ಸಂಸ್ಥೆಯ ಆವರಣದಲ್ಲಿ ಸಾರ್ವಜನಿಕರಿಗಾಗಿ ಹೊಸ ರೇಷನ್ ಕಾರ್ಡ್ ನೊಂದಣಿ ಘಟಕವನ್ನು ಆರಂಭಿಸಿದೆ. ಆಸಕ್ತ ಸಾರ್ವಜನಿಕರು ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಆರ್.ಟಿ. ನಟರಾಜ್ ತಿಳಿಸಿದ್ದಾರೆ. ವಿವರಗಳಿಗಾಗಿ- 08182-295161.