ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಳೆ ಮಾಂಸ ಮಾರಾಟ ನಿಷೇಧ

Rashmi Kasaragodu
Updated On : 24 May 2013, 11:11 am

ಶಿವಮೊಗ್ಗ: ಬುದ್ಧ ಪೂರ್ಣಿಮೆ ಅಂಗವಾಗಿ ಮೇ 25ರ ಶನಿವಾರ ಶಿವಮೊಗ್ಗ ನಗರಸಭಾ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ.
ಬುದ್ಧ ಜಯಂತಿ ದಿನದಂದು ಪ್ರಾಣಿ ಹಿಂಸೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ನಗರದ ಎಲ್ಲಾ ಮಾಂಸ ಮಾರಾಟಗಾರರು (ಎಲ್ಲ ಬಗೆಯ ಕಸಾಯಿ ಖಾನೆಗಳು) ಬುದ್ಧ ಜಯಂತಿ ದಿನದಂದು ಪ್ರಾಣಿ ಹಿಂಸೆ ಅಥವಾ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು. ಇದಕ್ಕೆ ಆಸ್ಪದ ನೀಡಬಾರದೆಂದು ನಗರಸಭೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement