ಫ್ಯಾಷನ್ ಡಿಸೈನಿಂಗ್ ಡಿಪ್ಲೊಮೊ ಕೋರ್ಸ್ಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಕಲಾ ಇಂಟರ್ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ಫ್ಯಾಷನ್ ಟೆಕ್ನಾಲಜಿ ಪ್ರಸಕ್ತ ಸಾಲಿನ ಒಂದು ವರ್ಷದ ಜೆಓಸಿ ಫ್ಯಾಷನ್ ಡಿಸೈನಿಂಗ್ ಡಿಪ್ಲೊಮೊ ತರಗತಿಗೆ ಅರ್ಜಿ ಆಹ್ವಾನಿಸಿದೆ. ಎಸ್ಎಸ್ಎಲ್ಸಿ ಉತ್ತೀರ್ಣ ಹಾಗೂ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆದರೆ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆರು ತಿಂಗಳು ಅವಧಿಯ ಡಿಪ್ಲೊಮೊ ತರಗತಿಗೆ ಪ್ರವೇಶಾವಕಾಶವಿದೆ. ಆಸಕ್ತರು ಸಂಸ್ಥೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಕಾರ್ಯದರ್ಶಿ ಆರ್.ಟಿ. ನಟರಾಜ್ ತಿಳಿಸಿದ್ದಾರೆ. ವಿವರಗಳಿಗಾಗಿ- 9448143165.
ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಗುಬ್ಬಿ ತೋಟದಪ್ಪನವರ ಧರ್ಮ ಸಂಸ್ಥೆ ಆಶ್ರಯದಲ್ಲಿ ನಗರದ ವೀರಶೈವ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿನಿಲಯವನ್ನು ನೀಡಲು ನಿರ್ಧರಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪಿಯುಸಿ ಮತ್ತು ನಂತರ ಕೋರ್ಸ್ಗಳಿಗೆ ಮಾತ್ರ ಅವಕಾಶವಿದೆ.
ಆಸಕ್ತ ವಿದ್ಯಾರ್ಥಿಗಳು ನವುಲೆಯಲ್ಲಿರುವ ಸಂಘದಲ್ಲಿ ಅರ್ಜಿ ಪಡೆದು ಜೂನ್ 10ರೊಳಗೆ ಸಲ್ಲಿಸಬೇಕು ಎಂದು ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.