ತಿಂಗಳ ಅತಿಥಿ
ಶಿವಮೊಗ್ಗ: ಕರ್ನಾಟಕ ಸಂಘ ಮೇ 27 ರಂದು ಸಂಜೆ ನಗರದ ಕರ್ನಾಟಕ ಸಂಘದ ಆವರಣದಲ್ಲಿ ತಿಂಗಳ ಅತಿಥಿ ಕಾರ್ಯಕ್ರಮ ಏರ್ಪಡಿಸಿದೆ. ಹಿರಿಯ ಕಲಾವಿದೆ ಭಾರ್ಗವಿ ನಾರಾಯಣ್ ಅವರು ಟಿವಿ ಮಾಧ್ಯಮದ ಒಳಿತು- ಕೆಡಕು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಸಂಘದ ಅಧ್ಯಕ್ಷ ಎಸ್.ವಿ. ತಿಮ್ಮಯ್ಯ ಅವರು ಉಪಸ್ಥಿತರಿರುವರು ಎಂದು ಸಂಘದ ಕಾರ್ಯದರ್ಶಿ ಡಾ.ಎಚ್.ಎಸ್. ನಾಗಭೂಷಣ ತಿಳಿಸಿದ್ದಾರೆ.
ಕಾರ್ಯದರ್ಶಿಯಾಗಿ ನೇಮಕ
ಶಿವಮೊಗ್ಗ: ಜಿಲ್ಲಾ ಅಲ್ಪಸಂಖ್ಯಾತರ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಂ. ಅಮೀರ್ ಸಾಬ್ ಅವರನ್ನು ನೇಮಕ ಮಾಡಲಾಗಿದ್ದು, ಪಕ್ಷದ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಅವರ ಆದೇಶದ ಮೇರಗೆ ಈ ತೀರ್ಮಾನಕೈಗೊಳ್ಳಲಾಗಿದೆ ಎಂದು ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸೈಯದ್ ವಾಹಿದ್ ತಿಳಿಸಿದ್ದಾರೆ.
ನಗರ ಕಾರ್ಯಕ್ರಮ
ಸಹ್ಯಾದ್ರಿ ವಿಜ್ಞಾನ ಕಾಲೇಜು- 4ನೇ ಪದವಿ ಪ್ರದಾನ ಸಮಾರಂಭ, ಮುಖ್ಯಅತಿಥಿ- ಪ್ರೊ.ಎಚ್.ಬಿ. ವಾಲೀಕರ್, ಡಾ.ಎಚ್.ಎಸ್. ಭೋಜಾನಾಯ್ಕ, ಸ್ಥಳ- ಸಹ್ಯಾದ್ರಿ ಕಾಲೇಜು ಆವರಣ, ಸಮಯ- ಬೆಳಿಗ್ಗೆ 11ಕ್ಕೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.