ಅರ್ಜಿ ಆಹ್ವಾನ
ಶಿವಮೊಗ್ಗ: ಗಾಜನೂರಿನ ತುಂಗಾ ವಿದ್ಯಾಪೀಠವು ಜಿಲ್ಲೆಯ ನಿರುದ್ಯೋಗಿ ಮಹಿಳೆಯರಿಗೆ ಜೂನ್ 10ರಿಂದ ನವೆಂಬರ್ 9ರವರೆಗೆ 5 ತಿಂಗಳ ಅವಧಿಯ ವಸತಿರಹಿತ ಡ್ರೆಸ್ ಮೇಕಿಂಗ್ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಯು 18ರಿಂದ 30 ವರ್ಷ ವಯೋವುತಿಯೊಳಗಿನವರಾಗಿರಬೇಕು. ನವಸಾಕ್ಷರರು ಮತ್ತು ಓದು- ಬರಹ ಬಲ್ಲವರು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ, ವರ್ಗದವರಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 500 ವೇತನ ನೀಡಲಾಗುವುದು. ಅಭ್ಯರ್ಥಿಗಳು ಒಡಂಬಡಿಕೆ ಪತ್ರ ಬರೆದುಕೊಡಬೇಕು. ಅಲ್ಲದೇ ಠೇವಣಿ ಹಣ 50ಗಳನ್ನು ಕಚೇರಿಗೆ ಪಾವತಿಸಬೇಕು. ತರಬೇತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಜೂನ್ 2ರಂದು ಬೆಳಿಗ್ಗೆ 11ಗಂಟೆಯಿಂದ ತುಂಗಾವಿದ್ಯಾಪೀಠದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ವಿವರಗಳಿಗಾಗಿ -08182-234229
ಪ್ರವಾಸ
ಶಿವಮೊಗ್ಗ: ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಸಿ.ಜಿ. ಹುನಗುಂದ ಅವರು ಮೇ 31ರಂದು ಸಂಜೆ 7ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು. ಜೂನ್ 1ರಂದು ಬೆಳಿಗ್ಗೆ 10.30ರಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸುವರು. ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು
ಸ್ವೀಕರಿಸಲಿದ್ದು, ಈ ದೂರುಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು. ಮಧ್ಯಾಹ್ನ 12.30ಕ್ಕೆ ಪೌರಾಯುಕ್ತರೊಂದಿಗೆ ಚರ್ಚಿಸಲಿದ್ದಾರೆ. ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡುವರು.