ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸಾಮಾಜಿಕ ಚಟುವಟಿಕೆಯಿಂದ ಉತ್ತಮ ಆರೋಗ್ಯ: ಕಾಗೋಡು

Lingaraj Badiger
Updated On : 27 May 2013, 11:02 am

ಕ.ಪ್ರ.ವಾರ್ತೆ, ಸಾಗರ, ಮೇ 26
ನೌಕರರು ನಿವೃತ್ತಿಯ ನಂತರ ನಿಷ್ಕ್ರಿಯರಾಗದೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಕೊಂಡರೆ ಆರೋಗ್ಯಪೂರ್ಣ ಜೀವನ ನಡೆಸಬಹುದು ಎಂದು ಶಾಸಕ ಕಾಗೋಡು ತಿಮ್ಮಪ್ಪ ಹೇಳಿದರು.
ಇಲ್ಲಿನ ನಿವೃತ್ತ ನೌಕರರ ಸಂಘವು ಭಾನುವಾರ ಹಮ್ಮಿಕೊಂಡಿದ್ದ ನಿವೃತ್ತ ಪ್ರಾಚಾರ್ಯ ಹಾಗೂ ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಆರ್. ಭೀಮಾಚಾರ್ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ, ನೌಕರರು ತಮ್ಮ ವೃತ್ತಿಜೀವನದ ಅನುಭವಗಳನ್ನು ಬಳಸಿಕೊಂಡು ಸಮಾಜ ಕಟ್ಟುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಸಂತೋಷ ತಂದಿದೆ: ಬಿ.ಆರ್. ಭೀಮಾಚಾರ್ ಶಿಕ್ಷಣ ಕಲಿಸುವ ಜೊತೆಗೆ ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಇವರು ಧಾರೆಯೆರೆದ ಜ್ಞಾನದಿಂದಾಗಿ ನನ್ನಂತಹ ಅನೇಕ ಶಿಷ್ಯರು ಇಂದು ಉನ್ನತ ಸ್ಥಾನ ತಲುಪಿ, ಜನರ ಕೆಲಸಗಳನ್ನು ಮಾಡಿಕೊಡಲು ಮುಂದಾಗಿದ್ದಾರೆ. ಈ ಕಾರ್ಯಕ್ರಮದ ಮೂಲಕ ವಿದ್ಯೆ ಕಲಿಸಿದ ನನ್ನ ಗುರುಗಳಿಗೆ ಸನ್ಮಾನಿಸುವ ಅವಕಾಶ ಲಭಿಸಿದ್ದು ಸಂತೋಷ ತಂದಿದೆ ಎಂದು ಹೇಳಿದರು.
ಭೀಮಾಚಾರ್ ಕುರಿತು ಅಭಿನಂದನಾ ಭಾಷಣ ಮಾಡಿದ ಸಾಹಿತಿ ಡಾ.ನಾ.ಡಿಸೋಜ, ಮಕ್ಕಳು ಪ್ರಾಥಮಿಕ ಹಂತದಲ್ಲಿ ಅಕ್ಷರ ಬರೆಯುವುದನ್ನು ಕಲಿತರೆ ಮಾಧ್ಯಮಿಕ ಹಂತದಲ್ಲಿ ಮಾತನಾಡುವುದನ್ನು ಕಲಿಯುತ್ತಾರೆ. ಪ್ರೌಢ ಶಿಕ್ಷಣದಲ್ಲಿ ಪರಿಸರದ ಜೊತೆ ಬೆರೆತು ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳುತ್ತಾರೆ. ಪ್ರೌಢಶಾಲಾ ಶಿಕ್ಷಣದಲ್ಲಿ ಪಾಠ ಮಾಡುವ ಶಿಕ್ಷಕರು ಪರಿಣಾಮ ಬೀರುವ ಜೊತೆಗೆ ಮಕ್ಕಳು ಅವರನ್ನು ಅನುಕರಣೆ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಪ್ರೌಢಶಾಲಾ ಹಂತ ಅತ್ಯಂತ ಪ್ರಮುಖ. ಬಿ.ಆರ್. ಭೀಮಾಚಾರ್ ಪ್ರೌಢಶಾಲಾ ಹಂತದಲ್ಲಿ ಬಹುತೇಕ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ. ಅವರು ಆದರ್ಶ ವ್ಯಕ್ತಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 36 ಮಂದಿ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶಶಾಂಕ್ ಅವರನ್ನು ಪುರಸ್ಕರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement