ಶೇ.100 ಫಲಿತಾಂಶ
ಶಿವಮೊಗ್ಗ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 2012-13ನೇ ಸಾಲಿನಲ್ಲಿ ನಡೆಸಿದ ಸಂಸ್ಕೃತ ಪ್ರಸಿದ್ಧ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಶಿವಮೊಗ್ಗದ ಶ್ರೀ ಬೆಕ್ಕಿನಕಲ್ಮಠದ ಸಂಸ್ಕೃತ ಪಾಠ ಶಾಲೆಗೆ ಶೇ.100ರಷ್ಟು ಫಲಿತಾಂಶ ಬಂದಿದೆ ಎಂದು ಶ್ರೀ ಜಗದ್ಗುರು ಗುರುಬಸವೇಶ್ವರ ಸಂಸ್ಕೃತ ಪಾಠಶಾಲೆಯ ಮುಖ್ಯೋಪಾಧ್ಯಾಯ ಸಿ. ರೇಣುಕಾರಾಧ್ಯ ತಿಳಿಸಿದ್ದಾರೆ.
ಇಂದು ಸಮಾವೇಶ
ಶಿವಮೊಗ್ಗ: ರಾಜ್ಯ ಭೂ-ವಿದ್ಯಾದಾನದ ಶಾಲಾ ಜಮೀನು ಗೇಣಿ ರೈತರ ಹೋರಾಟ ಸಮಿತಿ ಮೇ 28ರಂದು ಮಧ್ಯಾಹ್ನ 12ಗಂಟೆಗೆ ನಗರದ ಮಥುರಾ ಪ್ಯಾರಡೈಸ್ನ ಚಾಣಕ್ಯ ಸಭಾಂಗಣದಲ್ಲಿ ಶಾಲಾ ಜಮೀನು ಗೇಣಿ ರೈತರ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿದೆ.
ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಮುಖ್ಯ ಅತಿಥಿಯಾಗಿ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಮಾಜಿ ಶಾಸಕ ಬಿ.ಸ್ವಾಮಿರಾವ್, ವಿಧಾನಪರಿಷತ್ ಮಾಜಿ ಸದಸ್ಯ ಜಿ. ಮಾದಪ್ಪ, ಸಾಹಿತಿ ಕೋಣಂದೂರು ವೆಂಕಪ್ಪಗೌಡ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ರೈತ ಮುಖಂಡ ಕಡಿದಾಳ್ ಮಂಜಪ್ಪ ಅಧ್ಯಕ್ಷತೆ ವಹಿಸುವರು ಎಂದು ಸಮಿತಿ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.