ಅರ್ಜಿ ಆಹ್ವಾನ
ಶಿವಮೊಗ್ಗ: ಜಿಲ್ಲಾ ಮಡಿವಾಳ ಯುವ ವೇದಿಕೆ ಮಾಚಿದೇವ ಜಯಂತ್ಯುತ್ಸವದ ಅಂಗವಾಗಿ ಸಮುದಾಯದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. 2013-14ನೇ ಶೈಕ್ಷಣಿಕ ಸಾಲಿನ ಮಕ್ಕಳಿಗೆ ಉಚಿತ ನೋಟ್ಬುಕ್ ಮತ್ತು ಪ್ರತಿಭಾ ಪುರಸ್ಕಾರ ನೀಡಲಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಜೂನ್ 7ರೊಳಗೆ ಸಲ್ಲಿಸಬೇಕು ಎಂದು ವೇದಿಕೆ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ. ವಿವರಗಳಿಗಾಗಿ- 9448774552.
ಅರ್ಜಿ ಆಹ್ವಾನ
ಶಿವಮೊಗ್ಗ: ಶಿಕಾರಿಪುರದ ಬಸವ ಸೇವಾ ಸಂಸ್ಥೆ ನಡೆಸುತ್ತಿರುವ ಅನಾಥಾಲಯಕ್ಕೆ ನಿರಾಶ್ರಿತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೊದಲು ಬಂದವರಿಗೆ ಆದ್ಯತೆ ಇರುತ್ತದೆ. ಅಶ್ರಮದಲ್ಲಿ ಶಾಲಾ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಲಾಗುವುದು. ಇದರೊಂದಿಗೆ ಯೋಗ, ಧ್ಯಾನ, ಪ್ರಾಣಯಾಮ ಹೇಳಿಕೊಡಲಾಗುವುದು. ಆಸಕ್ತ ಮಕ್ಕಳು ಜೂನ್ 5ರೊಳಗೆ ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ. ವಿವರಗಳಿಗಾಗಿ- 08187-222944.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.