ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಪ್ರತಿ ತಿಂಗಳು ಕಾರ್ಯಕಾರಿ ಸಭೆ

Rashmi Kasaragodu
Updated On : 2 Nov 2013, 1:17 am

ಶಿವಮೊಗ್ಗ: ಪಕ್ಷದಲ್ಲಿ ಶಿಸ್ತು ಹಾಗೂ ಸಂಘಟನೆ ಬಲಪಡಿಸುವ ಉದ್ದೇಶದಿಂದ ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ತಿಳಿಸಿದರು.
ಬುಧವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾಮಟ್ಟದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಪ್ರತಿ ಸಭೆಯಲ್ಲಿ ಕೈಗೊಂಡು ನಿರ್ಣಯಗಳ ಬಗ್ಗೆ ಕೆಪಿಸಿಸಿಗೆ ಸಲ್ಲಿಸಲಾಗುವುದು. ಸಭೆ ನಡೆಸುವುದರೊಂದಿಗೆ ಪಕ್ಷದ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಹೇಳಿದರು.
ಶಾಸಕ ಕೆ.ಬಿ. ಪ್ರಸನ್ನಕುಮಾರ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ, ಸದಸ್ಯ ಇಸ್ಮಾಯಿಲ್ಖಾನ್, ವಿಧಾನಪರಿಷತ್ ಮಾಜಿ ಸದಸ್ಯ ಮೀರ ಅಜೀಜ್ ಅಹಮ್ಮದ್, ಮಾಜಿ ಶಾಸಕ ಬಿ. ಸ್ವಾಮಿರಾವ್, ವಕ್ತಾರ ಕೆ. ದಿವಾಕರ್, ನಗರಸಭೆ ಖುರ್ಷಿದ್ಬಾನು, ಕರಿಯಣ್ಣ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement