ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

3 ಕೋಟಿ ವೆಚ್ಚದಲ್ಲಿ ಸಂತೆ ಮೈದಾನ ನಿರ್ಮಾಣ

Lingaraj Badiger
Updated On : 6 Nov 2013, 10:45 am

ಕ.ಪ್ರ.ವಾರ್ತೆ, ಸಾಗರ, ನ. 5
ಪಟ್ಟಣದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 206ರ ಗಣಪತಿ ಕೆರೆ ಪಕ್ಕದಲ್ಲಿರುವ ಮೂರು ಎಕರೆ ಪ್ರದೇಶದಲ್ಲಿ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸಂತೆ ಮೈದಾನ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಹೇಳಿದರು.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಮೀನು ಹಾಗೂ ಮಾಂಸ ಮಾರಾಟ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಸದ್ಯದಲ್ಲಿಯೆ ಸಂತೆ ಮೈದಾನ ನಿರ್ಮಾಣ ಮಾಡಲು ಉದ್ದೇಶಿಸಿದ ಜಾಗವನ್ನು ಸಮತಟ್ಟು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸಂತೆ ಮೈದಾನ ಅಭಿವೃದ್ಧಿಗೆ ಎಪಿಎಂಸಿ ಅನುದಾನ ನೀಡಲಿದೆ ಎಂದು ತಿಳಿಸಿದರು.
ಹೆಚ್ಚು ಜನ ಬಂದು ಹೋಗುವ ಸಂತೆ ಮಾರ್ಕೆಟಿನ ವಾತಾವರಣ ನೋಡಿದರೆ ಎಂಥವರು ಬೇಸರ ಪಟ್ಟುಕೊಳ್ಳುತ್ತಾರೆ. ಕೆಟ್ಟ ವಾಸನೆ, ತ್ಯಾಜ್ಯ ನಮ್ಮ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ತಕ್ಷಣ ಮಾರ್ಕೆಟ್ ಸುಸಜ್ಜಿತಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ ಪ್ರತಿದಿನ ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಆಯಾ ದಿನವೇ ವಿಲೇವಾರಿ ಮಾಡುವ ಜೊತೆಗೆ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.
ಒಣಮೀನು ಮಾರ್ಕೆಟ್ ಪೂರ್ಣ ಶಿಥಿಲಗೊಂಡಿದ್ದು ಅದನ್ನು ಪುನರ್ ನಿರ್ಮಾಣ ಮಾಡುವುದು ಹಾಗೂ ಮಾಂಸ ಮಾರುಕಟ್ಟೆ ಬಳಿ ಇರುವ ಖಸಾಯಿಖಾನೆ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡುವ ಕೆಲಸ ತಕ್ಷಣದಿಂದ ಆರಂಭಿಸುವಂತೆ ಹೇಳಿದ ಅವರು, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ವ್ಯಾಪಾರಿಗಳು ಸಹ ಹೆಚ್ಚು ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.
ನಗರಸಭೆ ಪ್ರಬಾರಿ ಪೌರಾಯುಕ್ತ ಪೂವಯ್ಯ, ಕಿರಿಯ ಅಭಿಯಂತರ ಎಚ್.ಕೆ. ನಾಗಪ್ಪ, ಪ್ರಮುಖರಾದ ತೀ.ನ.ಶ್ರೀನಿವಾಸ್, ಮಕ್ಬೂಲ್ ಅಹ್ಮದ್, ಕೆ. ಹೊಳೆಯಪ್ಪ ಇನ್ನಿತರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement