ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಪಘಾತದಲ್ಲಿ ವ್ಯಕ್ತಿ ಸಾವು

Lingaraj Badiger
Updated On : 6 Nov 2013, 10:45 am

ಶಿವಮೊಗ್ಗ: ಲಾರಿ ಮತ್ತು ಸ್ಕೂಟಿ ನಡುವೆ ನಡೆದ ರಸ್ತೆ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಮಿಳಘಟ್ಟ ಕ್ರಾಸ್ ಬಳಿ ನಡೆದಿದೆ.
ರವಿವರ್ಮ ರಸ್ತೆಯ ಎಸ್.ಎಲ್. ಭಾಸ್ಕರ್ (63) ಮೃತಪಟ್ಟವರು. ಇವರು ಮಿಳಘಟ್ಟ ರಸ್ತೆಯಿಂದ ಸಾಗರ ರಸ್ತೆ ಕಡೆಗೆ ಹೋಗುತ್ತಿರುವಾಗ ಅಶೋಕ ವೃತ್ತದ ಕಡೆಯಿಂದ ಬಂದ ಲಾರಿ ನೇರವಾಗಿ ಇವರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಭಾಸ್ಕರ್ ಅವರ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಅವರನ್ನು ತಕ್ಷಣ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬರು ಪುತ್ರಿ ಇದ್ದಾರೆ. ಇವರು ಸ್ವಾತಂತ್ರ್ಯ ಹೋರಾಟಗಾರ ಎಸ್.ಎಲ್. ಶ್ರೀರಂಗರಾಜು ಅವರ ಸಹೋದರ.
ಸ್ಥಳೀಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement