ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Lingaraj Badiger
Updated On : 6 Nov 2013, 10:45 am

ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ರೌಡಿ ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ನಗರದ ಅನಕೃ ರಸ್ತೆಯಲ್ಲಿ ನಡೆದಿದೆ. ಒಂದು ಗುಂಪಿನ ಯುವಕನೊಬ್ಬ ಬೈಕ್‌ನಲ್ಲಿ ತೆರಳುತ್ತಿರುವಾಗ 7-8 ಜನರು ಗುಂಪು ತಡೆದು ನಿಲ್ಲಿಸಿ ಗಲಾಟೆ ಮಾಡಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಹೊಡೆದು ಚಾಕುವಿನಿಂದ ಕಾಲಿಗೆ ತಿವಿದಿದ್ದಾರೆ. ಗಾಯಗೊಂಡ ಯುವಕನನ್ನು ಮೆಗ್ಗಾನ್ ಆಸ್ಪತ್ರೆ ದಾಖಲಿಸಲಾಗಿದೆ.
ಈ ಘಟನೆಗೆ ಎರಡು ಗುಂಪುಗಳ ನಡುವೆ ಇದ್ದ ಹಳೇ ದ್ವೇಷವೇ ಕಾರಣ. ಈ ಹಿನ್ನೆಲೆಯಲ್ಲಿ ಎದುರಾಳಿ ಗುಂಪಿಗೆ ಎಚ್ಚರಿಕೆಯ ಸಂದೇಶ ನೀಡುವ ಉದ್ದೇಶದಿಂದ ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಜಯನಗರ ಠಾಣೆಯಲ್ಲಿ ದಾಖಲಾಗಿದೆ.
ಯುವಕ ಆತ್ಮಹತ್ಯೆ
ಶಿವಮೊಗ್ಗ: ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಸೆಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ಹರೀಶ್(17) ಆತ್ಮಹತ್ಯೆ ಮಾಡಿಕೊಂಡವರು. ಈತ ಎಂದಿನಂತೆ ಮನೆ ಮಹಡಿಯ ಕೊಠಡಿಯಲ್ಲಿ ಮಲಗಲು ಹೋಗಿದ್ದ ಹರೀಶ್ ಮಂಗಳವಾರ ಬೆಳಿಗ್ಗೆ ಎದ್ದು ಬಂದಿರಲಿಲ್ಲ. ಬಳಿಕ ಪೋಷಕರು ಹೋಗಿ ನೋಡಿದಾಗ ಹರೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಾರಣ ತಿಳಿದು ಬಂದಿಲ್ಲ. ಇವರು ಅನವಟ್ಟಿ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ಅವರ ಪುತ್ರ. ಪ್ರಕರಣ ದಾಖಲಾಗಿದೆ.
ನ್ಯಾಯವಾದಿ ಆತ್ಮಹತ್ಯೆ
ಸೊರಬ: ಅವಿವಾಹಿತ ಮಹಿಳಾ ನ್ಯಾಯವಾದಿಯೊಬ್ಬರು ತಮ್ಮ ಮನೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆನವಟ್ಟಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಎಸ್.ಪಿ. ಪ್ರಿಯಾಂಕ (28) ಮೃತ ಮಹಿಳೆ. ಶಿವಮೊಗ್ಗ ನ್ಯಾಯಾಲಯದಲ್ಲಿ ನ್ಯಾಯವಾದಿಯಾಗಿದ್ದ ಇವರು ಅನಾರೋಗ್ಯ ಕಾರಣದಿಂದ ಇವರು ಊರಿಗೆ ಬಂದಿದ್ದರು. ರಾತ್ರಿ ನೇಣು ಹಾಕಿಕೊಂಡಿದ್ದಾರೆ. ಈ ಸಂಬಂಧ ಆನವಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ನಿಧನಕ್ಕೆ ಸಂತಾಪ ಸೂಚಿಸಿ ಮಂಗಳವಾರ ಶಿವಮೊಗ್ಗ ನ್ಯಾಯಾಲಯ ಕಲಾಪ ಸ್ಥಗಿತಗೊಳಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement