ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಳೆಯಿಂದ ಕನ್ನಡ ವನಚ ಸಾಹಿತ್ಯ, ಸಾಂಸ್ಕೃತಿಕ ಸಮ್ಮೇಳನ

Vishwanath S
Updated On : 8 Nov 2013, 12:32 pm

ಶಿವಮೊಗ್ಗ: ಮೂರನೇ ಅಖಿಲ ಭಾರತ ಕನ್ನಡ ವನಚ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ ನವೆಂಬರ್ 9 ಮತ್ತು 10ರಂದು ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದ ಸ್ವಾಮೀಜಿ, ವಚನದ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ವಚನದಲ್ಲಿನ ಸಾಮಾಜಿಕ ಸಾಂಸ್ಕೃತಿಕ ಮೌಲ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಸಮ್ಮೇಳನ ಆಯೋಜಿಸಿರುವುದಾಗಿ ತಿಳಿಸಿದರು.
ದಾನಪ್ರಕಾಶ ಎನ್. ತಿಮ್ಮಪ್ಪ ಸಾಮಾಜಿಕ ಮತ್ತು ಸಾಂಸ್ಕೃತಿಕ ವಿದ್ಯಾಟ್ರಸ್ಟ್ ಆಯೋಜಿಸಿರುವ ಈ ಸಮ್ಮೇಳನದ ಅಧ್ಯಕ್ಷರಾಗಿ ನಿವೃತ್ತ ಪ್ರೊಫೆಸರ್ ಡಾ.ಎಸ್.ಆರ್.ಗುಂಜಾಳ್ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ ಸ್ವಾಮೀಜಿ, ನ.9ರ ಬೆಳಿಗ್ಗೆ 9 ಗಂಟೆಗೆ ಕರ್ನಾಟಕ ಸಂಘದಿಂದ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಗರದ ಪ್ರಮುಖ ರಸ್ತೆಯಲ್ಲಿಸಾಗಿ ಕುವೆಂಪು ರಂಗಮಂದಿರ ತಲುಪಲಿದೆ. ನಂತರ 11 ಗಂಟೆಗೆ ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಸಮ್ಮೇಳನ ಉದ್ಘಾಟಿಸುವರು ಎಂದರು.
ಮಧ್ಯಾಹ್ನ 2 ಗಂಟೆಗೆ ಡಾ. ಎಸ್.ಆರ್.ಗುಂಜಾಳ ಅವರ ಬದುಕು ಮತ್ತು ಬರಹ ಕುರಿತು ವಿಚಾರಗೋಷ್ಠಿ ನಡೆಯಲಿದ್ದು, 3 ಗಂಟೆಗೆ ವಿಜಯ ಶ್ರೀಧರ್ ಅಧ್ಯಕ್ಷತೆಯಲ್ಲಿ ಮಹಿಳಾ ವಚನ ಚಿಂತನ ಗೋಷ್ಠಿ ನಡೆಯಲಿದೆ ಎಂದರು. ನ.10ರ ಬೆಳಿಗ್ಗೆ 9 ಗಂಟೆಗೆ ವಚನ ಚಿಂತನಾಗೋಷ್‌ಠಿಯು ಡಾಣಸಂಗಮೇಶ ಹಂಡಿಗೆ ಅಧ್ಯಕ್ಷತೆಯಲ್ಲಿ ನಡೆಯಲಿದೆ. 11.30ಕ್ಕೆ ಪ್ರೊ.ಎಚ್.ಎಸ್. ಪಾಟೀಲ್ ಅಧ್ಯಕ್ಷತೆಯಲ್ಲಿ ವಚನ ಚಿಂತನ ಗೋಷ್ಠಿ ನಡೆಯುವುದು. 2 ಗಂಟೆಗೆ ಹೊರನಾಡು ಕನ್ನಡಿಗರ ವಚನ ಚಿಂತನ ಗೋಷ್ಠಿ, ಸಂಜೆ 4 ಗಂಟೆಗೆ ಉಪನ್ಯಾಸ ನಡೆಯಲಿದ್ದು, 6.30ರಿಂದ ಪ್ರಶಸ್ತಿ ಪ್ರದಾನ, ಸಮಾರೋಪ ನಡೆಯಲಿದೆ. ಡಾ. ಚಿದಾನಂದಮೂರ್ತಿ ಸಮಾರೋಪ ಭಾಷಣ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement