ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕನಕ ಜಯಂತಿ ಆಚರಣೆಗೆ ಜಿಲ್ಲಾಡಳಿತ ಸಜ್ಜು

Lingaraj Badiger
Updated On : 11 Nov 2013, 10:57 am

ಶಿವಮೊಗ್ಗ: ನ. 20ರಂದು ಕನಕ ಜಯಂತಿಯನ್ನು ಅದ್ಧೂರಿ ಆಚರಣೆಗೆ ಜಿಲ್ಲಾಡಳಿತ ಸಜ್ಜುಗೊಂಡಿದೆ.
ಶುಕ್ರವಾರ ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ಅವರ ಅಧ್ಯಕ್ಷತೆಯಲ್ಲಿ ಕನಕ ಜಯಂತಿ ಆಚರಣೆ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಪೂರ್ವಬಾವಿ ಸಭೆ ನಡೆಯಿತು.
ಈ ಬಾರಿಯ ಕನಕ ಜಯಂತಿಯನ್ನು ಜಿಲ್ಲೆಯಲ್ಲಿ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಸಿದ್ಧತೆ ನಡೆದಿವೆ ಎಂದು ಜಿಲ್ಲಾಧಿಕಾರಿ ವಿಪುಲ್ ಬನ್ಸಲ್ ತಿಳಿಸಿದರು.
ನ. 20ರಂದು ಬೆಳಗ್ಗೆ 9 ಗಂಟೆಗೆ ರಾಮಣ್ಣ ಶೇಷ್ಠಿ ಪಾರ್ಕ್‌ನಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರದ ಮೆರವಣಿಗೆ, ಅಮೀರ್ ಅಹಮ್ಮದ್ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್‌ನಿಂದ ಬಾಲರಾಜ ಅರಸ್ ರಸ್ತೆ ಮೂಲಕ ಕುವೆಂಪು ರಂಗಮಂದಿರ ಸೇರಲಿದೆ.
ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಕನಕ ಜಯಂತಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಲ್ಲದೆ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳ ಮುಖಂಡರು, ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಅಲ್ಲದೆ, ಕನಕದಾಸರ ಕುರಿತಾಗಿ ವಿದ್ವಾಂಸರಿಂದ ಉಪನ್ಯಾಸ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಎನ್‌ಇಎಸ್ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ.ತಿಮ್ಮಯ್ಯ, ಮುಖಂಡರಾದ ಪ್ರಸನ್ನಕುಮಾರ್, ನಗರಸಭೆ ಆಯುಕ್ತ ಮೂಕಪ್ಪ ಕರಭೀಮಣ್ಣನವರ್, ಜಿಪಂ ಉಪಕಾರ್ಯದರ್ಶಿ ಗೋಪಾಲ್, ಉಪವಿಭಾಗಾಧಿಕಾರಿ ಕುಸುಮ ಕುಮಾರಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement