ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾನೂನು ಅನುಕೂಲ ಪಡೆಯಲು ಸಲಹೆ

Lingaraj Badiger
Updated On : 11 Nov 2013, 10:44 am

ಭದ್ರಾವತಿ: ಕಾನೂನು ಸೇವಾ ಸಮಿತಿಯ ಸೇವೆಯನ್ನು ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರು ಬಳಸಿಕೊಂಡು ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ, ಹಿರಿಯ ನ್ಯಾಯಾಧೀಶರಾದ ಜ್ಯೋತಿಶ್ರೀ ಹೇಳಿದರು.
ಅವರು ಶನಿವಾರ ತರೀಕೆರೆ ರಸ್ತೆಯ ಸರ್ಕಾರಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾನೂನು ಸೇವಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಉಚಿತ ಕಾನೂನು ಸೇವೆ ಸಲ್ಲಿಸಲು ಕಾನೂನು ಸೇವಾ ಪ್ರಾಧಿಕಾರ ಅನೇಕ ವ್ಯವಸ್ಥೆಗಳನ್ನು ಮಾಡಿದ್ದು, ನಾಗರಿಕರು ಇವುಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದು ಅಗತ್ಯವಿರುವವರಿಗೆ ಇದರ ಸೌಲಭ್ಯ ಪಡೆದುಕೊಳ್ಳಲು ನೆರವಾಗಬೇಕು ಎಂದು ತಾ.ಕಾ.ಸೇ. ಸಮಿತಿ ನೀಡುವ ಸೌಲಭ್ಯಗಳನ್ನು ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಗುಡ್ಡದ ಮಲ್ಲಪ್ಪ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ಬಿ.ಎಸ್. ಮಹೇಶ್ ಕುಮಾರ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement