ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸೌಂದರ್ಯಲಹರಿ ಸಪ್ತಾಹ ಮಂಗಲ

Lingaraj Badiger
Updated On : 11 Nov 2013, 10:44 am

ಶಿವಮೊಗ್ಗ: ಶುಭಮಂಗಳ ಸೇವಾ ಟ್ರಸ್ಟ್ ಸಂಸ್ಥೆಯು ನ.12ರ ಮಂಗಳವಾರ ಬೆಳಗ್ಗೆ 8.30ಕ್ಕೆ ಸೌಂದರ್ಯ ಲಹರಿ ಸಪ್ತಾಹ ಮಂಗಲ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈಗಾಗಲೇ ಶಿವಮೊಗ್ಗ ನಗರದಲ್ಲಿ ಸುಮಾರು 36 ಕೇಂದ್ರಗಳಲ್ಲಿ ಸೌಂದರ್ಯಲಹರಿ ಸಪ್ತಾಹ ನಡೆಯುತ್ತಿದ್ದು, ಪ್ರತಿದಿನ ಸಾವಿರಕ್ಕಿಂತಲೂ ಅಧಿಕ ಮಹಿಳೆಯರು ಭಾಗವಹಿಸುತ್ತಿದ್ದಾರೆ.
ಈ ಸಪ್ತಾಹದ ಮಂಗಲ ಕಾರ್ಯಕ್ರಮ ನ.12ರಂದು ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಶುಭಮಂಗಳ ಸಮುದಾಯ ಭವನದಲ್ಲಿ ನಡೆಯಲಿದೆ. ಅಂದು ಸಾವಿರಾರು ಮಾತೆಯರು ಸಾಮೂಹಿಕವಾಗಿ ಸೌಂದರ್ಯಲಹರಿ ಮತ್ತು ಶ್ರೀ ಲಲಿತಾ ಸಹಸ್ರನಾಮ ಪಠಣ ಹಾಗೂ ಭಜನೆ ನಡೆಸಲಿದ್ದಾರೆ.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ವಿನಯಾನಂದ ಸರಸ್ವತಿ ಸ್ವಾಮಿಗಳು ನೆರವೇರಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಸಿದ್ಧ ವಾಗ್ಮಿ ವಿದ್ವಾನ್ ವೇದಬ್ರಹ್ಮ ಪಂಜಾಭಾಸ್ಕರ ಭಟ್ಟರು ಮಾತನಾಡಲಿದ್ದಾರೆ.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಶುಭಮಂಗಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ.ಇ ಕಾಂತೇಶ್ ಉಪಸ್ಥಿತರಿರುತ್ತಾರೆ.

17ರಂದು ರಾಜ್ಯೋತ್ಸವ ಆಚರಣೆ
ಶಿವಮೊಗ್ಗ: ಭಾವಸಾರ ಕ್ಷತ್ರಿಯ ಯುವಕ ಸಂಘವು ನವೆಂಬರ್ 17ರಂದು ಬೆಳಿಗ್ಗೆ 11.30ಕ್ಕೆ ಶ್ರೀ ತುಳಜಾ ಭವಾನಿ ದೇವಸ್ಥಾನದ ಆವರಣದಲ್ಲಿ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಸ್‌ಎಸ್‌ಎಲ್‌ಸಿ ಕನ್ನಡ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರನ್ನು ಗೌರವಿಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement