ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕಾಂಗ್ರೆಸ್ನಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಆಂಜನೇಯ

Rashmi Kasaragodu
Updated On : 12 Nov 2013, 11:26 am

ಭದ್ರಾವತಿ: ಕೋಮುವಾದಿಗಳಿಂದ ದೇಶರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರಸಾಧ್ಯ ಸಮಾಜ ಕಲ್ಯಾಣ ಇಲಾಖೆ ಸಚಿವ ಆಂಜನೇಯ ಹೇಳಿದರು.
ನಗರದ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಎಂಪಿ, ಎಂಎಲ್ಎ, ಸ್ಥಾನಕ್ಕೆ ಆರಿಸುವ ಮೂಲಕ ತನ್ನ ಪ್ರಾಬಲ್ಯ ಉಳಿಸಿಕೊಂಡು ಬಂದಿದ್ದ ಭದ್ರಾವತಿಯಲ್ಲಿ ಈಗ ಪಕ್ಷ ದುರ್ಬಲವಾಗಿದೆ ಎನ್ನುವುದಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಸಶಕ್ತ ರಾಜಕಾರಣಿ ಸಿ.ಎಂ. ಇಬ್ರಾಹಿಂ ಸೋಲೆ ಸಾಕ್ಷಿ. ಸಿ.ಎಂ. ಇಬ್ರಾಹಿರನ್ನು ಈ ಕ್ಷೇತ್ರದಿಂದ ಗೆಲ್ಲಿಸಿದ್ದಿದ್ದರೆ ಮುಖ್ಯಮಂತ್ರಿಗಳ ಬಲಗೈ ಬಂಟರಂತಿರುವ ಅವರು 2ನೇ ಮುಖ್ಯಮಂತ್ರಿಗಳಂತೆ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದರು ಎಂದರು.
ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಹುಲ್ ಗಾಂಧಿಯನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಎಐಸಿಸಿ ಸದಸ್ಯೆ ಬಲ್ಕಿಷ್ ಬಾನು, ಪಕ್ಷದ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ತಾಲೂಕು ಅಧ್ಯಕ್ಷ ಗಿರಿಯಪ್ಪ, ಮುಖಂಡರಾದ ಸಾದಿಕ್, ಮಂಜಪ್ಪಗೌಡ, ಟಿ.ವಿ. ಗೋವಿಂದಸ್ವಾಮಿ, ಪಲ್ಲವಿ, ಅಮೀರ್ಜಾನ್, ಗಣೇಶ್, ರಾಮಚಂದ್ರ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement