ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

Rashmi Kasaragodu
Updated On : 14 Nov 2013, 11:54 am

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಚಿಪ್ಪಳ್ಳಿ ಮತ್ತು ಬಿಳಿಸಿರಿಯ 2 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಬಿಳಿಸಿರಿ ಮತ್ತು ಶಿರವಂತೆ ಕೇಂದ್ರಗಳ ಅಂಗನವಾಡಿ ಸಹಾಯಕಿಯರ 2 ಹುದ್ದೆಗೆ  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18ರಿಂದ 44 ವರ್ಷ ವಯೋವುತಿಯೊಳಗಿನ ಎಸ್ಸೆಸೆಲ್ಸಿಯಲ್ಲಿ ಉತ್ತೀರ್ಣರಾದ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂಗನವಾಡಿಯ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಾಗರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಕಾರ್ಯಾಲಯದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಡಿ. 5ರೊಳಗಾಗಿ ಸಲ್ಲಿಸುವಂತೆ ಸಾಗರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement