ಗೌತಮಪುರ ಶಾಲಾ ಕ್ರೀಡಾಂಗಣಕ್ಕೆ ಗುದ್ದಲಿಪೂಜೆ
ತ್ಯಾಗರ್ತಿ: ಸಾಗರ ತಾಲೂಕಿನ ಗೌತಮಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಸಜ್ಜಿತ ಶಾಲಾ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗೆ ಗ್ರಾಪಂ ಅಧ್ಯಕ್ಷ ಯೋವುಕೇಶ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಹಲವು ಸೌಲತ್ತು ನೀಡುತ್ತಿದೆ. ಗ್ರಾ.ಪಂ. ವ್ಯಾಪ್ತಿಯ ಕೇಂದ್ರ ಸ್ಥಳದ ಶಾಲೆಯ ಅಟದ ಮೈದಾನ ಅಭಿವೃದ್ಧಿಪಡಿಸಿ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಈ ಕಾಮಗಾರಿಗಾಗಿ 10 ಲಕ್ಷ ಮೀಸಲಿಡಲಾಗಿದೆ ಎಂದರು.
ಕ್ರೀಯಾ ಯೋಜನೆಯ ಪಟ್ಟಿಯಂತೆ ವಿವಿಧ ಹಂತಗಳಲ್ಲಿ ಈ ಕಾಮಗಾರಿ ನಡೆಸಲಾಗುತ್ತದೆ. ಸಾರ್ವಜನಿಕರು ಈ ಬಗ್ಗೆ ನಿರಂತರ ಮಾರ್ಗದರ್ಶನ ಮತ್ತು ಸಲಹೆ ನೀಡಲು ಮುಕ್ತ ಅವಕಾಶವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಜಗನ್ನಾಥ, ಈರಪ್ಪ, ಪ್ರೇಮ್, ಗ್ರಾಪಂ ಅಭಿವೃದ್ಧಿ ಅಧಿಕಾರಿ ರಂಗಪ್ಪ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಜಪ್ಪ, ಶಾಲಾ ಮುಖ್ಯೋಪಾಧ್ಯಾಯಿನಿ ಇಂದಿರಾ ಮತ್ತಿತರು ಈ ಸಂದರ್ಭದಲ್ಲಿ ಇದ್ದರು.