ಅರ್ಜಿ ಆಹ್ವಾನ
ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು ಬಿ.ಆರ್. ಪ್ರಾಜೆಕ್ಟ್ನ ಒಳನಾಡು ಮೀನು ತರಬೇತಿ ಕೇಂದ್ರದಲ್ಲಿ ಸುಮಾರು 40 ಗ್ರಾಮೀಣ ನಿರುದ್ಯೋಗಿ ಪುರುಷ ಅಭ್ಯರ್ಥಿಗಳಿಗೆ ಡಿ.16 ರಿಂದ 2 ತಿಂಗಳವರೆಗೆ ಒಳನಾಡು ಮೀನುಗಾರಿಕೆ ತರಬೇತಿಯನ್ನು ನೀಡಲು ಉದ್ದೇಶಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ತರಬೇತಿ ಅವಧಿಯಲ್ಲಿ ಮೀನುಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ಥಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಪಾಲನೆ ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 1 ಸಾವಿರ ಶಿಷ್ಯ ವೇತನ ನೀಡಲಾಗುವುದು.
ಆಸಕ್ತರು ಅರ್ಜಿಯನ್ನು ಬಿ.ಆರ್. ಪ್ರಾಜೆಕ್ಟ್ನ ಮೀನುಗಾರಿಕೆ ತರಬೇತಿ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಡಿ.10ರೊಳಗಾಗಿ ಸಲ್ಲಿಸಬೇಕು. ವಿವರಗಳಿಗಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಮೀನುಗಾರಿಕೆ ಇಲಾಖಾ ಕಚೇರಿಯನ್ನು ಸಂಪರ್ಕಿಸುವಂತೆ ಬಿ.ಆರ್. ಪ್ರಾಜೆಕ್ಟ್ನ ಮೀನುಗಾರಿಕೆ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.