ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಸತ್ಪ್ರಜೆಗಳ ನಿರ್ಮಾಣಕ್ಕೆ ಸರ್ಕಾರ ಒತ್ತು

Rashmi Kasaragodu
Updated On : 19 Nov 2013, 11:05 am

ಕ.ಪ್ರ.ವಾರ್ತೆ, ಶಿವಮೊಗ್ಗ, ನ.18
ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಸೌಲಭ್ಯ ಕೊಡುವ ಮೂಲಕ ಸದೃಢ ಸತ್ಪ್ರಜೆಗಳ ನಿರ್ಮಾಣಕ್ಕೆ ಸರ್ಕಾರ ಒತ್ತು ನೀಡುತ್ತಿದೆ ಎಂದು ಶಾಸಕ ಕೆ.ಬಿ. ಪ್ರಸನ್ನಕುಮಾರ್ ತಿಳಿಸಿದರು.
ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಎಂಟನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್ ವಿತರಿಸಿ ಅವರು ಮಾತನಾಡಿದರು.
ಹಲವು ಯೋಜನೆ: ದೇಶದ ಮುಂದಿನ ಆಸ್ತಿ ವಿದ್ಯಾರ್ಥಿಗಳೇ ಆಗಿರುವುದರಿಂದ ಅವರನ್ನು ಸದೃಢ ಹಾಗೂ ಸತ್ಪ್ರಜೆಗಳನ್ನಾಗಿ ರೂಪಿಸುವ ಉದ್ದೇಶದಿಂದ ಸರ್ಕಾರ ಉಚಿತ ಬೈಸಿಕಲ್ ವಿತರಣೆ, ಕ್ಷೀರಭಾಗ್ಯ, ಉಚಿತ ಕಡ್ಡಾಯ ಶಿಕ್ಷಣ, ಉಚಿತ ಸಮವಸ್ತ್ರ, ಪುಸ್ತಕಗಳ ವಿತರಣೆಯಂತಹ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ, ಶಿಕ್ಷಣ ಕ್ಷೇತ್ರಕ್ಕೆ ಮೂಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಹೆಚ್ಚು ಅನುದಾನ ಬಿಡುಗಡೆಗೊಳಿಸಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಂಡು ದೇಶಕ್ಕೆ ಕೊಡುಗೆಯಾಗಿ ಬೆಳೆಯಬೇಕು. ಶಾಲೆಯಲ್ಲಿ ಶ್ರದ್ಧೆಯಿಂದ ಕಲಿತು ಪೋಷಕರಿಗೆ, ನಾಡಿಗೆ ಕೀರ್ತಿ ತರಬೇಕು ಎಂದರು.
ಎಲ್ಲರೂ ವಿದ್ಯಾವಂತರಾಗಿ: ಕ್ಷೇತ್ರ ಶಿಕ್ಷಣಾಧಿಕಾರಿ ಹಾಲಾನಾಯ್ಕ್ ಮಾತನಾಡಿ, ಎಲ್ಲಾ ಮಕ್ಕಳು ವಿದ್ಯಾವಂತರಾಗಬೇಕು ಎಂಬ ಸದುದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿಗೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರುವ ಪ್ರಯತ್ನ ನಡೆದಿದ್ದು, ಸಾರ್ವಜನಿಕರು ಸರ್ಕಾರದ ಉದ್ದೇಶಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮಾಪತಿ ಮಾತನಾಡಿ, ದುರ್ಗಿಗುಡಿ ಶಾಲೆ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಶಾಲೆಯ ಸುತ್ತಲೂ ಗ್ರಿಲ್ ಅಳವಡಿಸಬೇಕೆಂಬ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು. ನಗರಸಭೆ ಸದಸ್ಯ ಗೋಪಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement