ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

'ಪ್ರತಿಯೊಬ್ಬರೂ ಕಣ್ಣಿನ ಕಾಳಜಿ ವಹಿಸಲಿ'

Mainashree
Updated On : 20 Nov 2013, 11:08 am

ಕ.ಪ್ರ.ವಾರ್ತೆ  ಶಿರಾಳಕೊಪ್ಪ   ನ.19
ಮನುಷ್ಯನಿಗೆ ಅತ್ಯಂತ ಮುಖ್ಯವಾದ ಅಂಗ ಕಣ್ಣು. ಪ್ರತಿಯೊಬ್ಬರು ನೇತ್ರದ ಬಗ್ಗೆ ವಿಶೇಷ ಕಾಳಜಿ ವಹಿಸಿ ಏನೇ ಕಣ್ಣಿನ ಸಮಸ್ಯೆ ಬಂದಾಗ ನೇತ್ರ ವೈದ್ಯರ ಬಳಿ ಚಿಕಿತ್ಸೆ ಪಡೆಯಬೇಕು ಎಂದು ಪ್ರಗತಿ ಕೃಷ್ಣಾ ಬ್ಯಾಂಕ್ ಮ್ಯಾನೇಜರ್ ಪಾಂಡುರಂಗ ತಿಳಿಸಿದರು.
ಶಿರಾಳಕೊಪ್ಪ ಹತ್ತಿರದ ಇಂಡವಳ್ಳಿಯಲ್ಲಿ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್, ಶಂಕರ ಕಣ್ಣಿನ ಆಸ್ಪತ್ರೆ, ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಹಾಗೂ ಗ್ರಾಪಂ ಆಶ್ರಯದಲ್ಲಿ ಗ್ರಾಪಂ ಕಚೇರಿಯಲ್ಲಿ ನಡೆದ ನೇತ್ರ ತಪಾಸಣೆ, ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರು ಹಾಗೂ ಇತರ ಪ್ರಮುಖರು ಹಾಜರಿದ್ದು, ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಶಿಬಿರದಲ್ಲಿ 208 ಜನರು ತಪಾಸಣೆ ಮಾಡಿಸಿಕೊಂಡರು.
ಇಂಡವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯುವರಾಜ್, ಉಪಾಧ್ಯಕ್ಷ ಎಂ. ನಾಗರಾಜ, ಶಿರಾಳಕೊಪ್ಪ ಅರ್ಬನ್ ಬ್ಯಾಂಕ್ ಕಾರ್ಯದರ್ಶಿ ಹಾಲಪ್ಪಗೌಡ, ಗ್ರಾಮ ಪಂಚಾಯಿತಿ  ಮಾಜಿ ಅಧ್ಯಕ್ಷ ಕಮಲಾಕರ್, ಗ್ರಾಪಂ ಸದಸ್ಯರು, ಇತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement