ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

Lingaraj Badiger
Updated On : 21 Nov 2013, 10:32 am

ಶಿವಮೊಗ್ಗ: ಬಾಕಿ ವೇತನ ಮತ್ತು ಕಾರ್ಮಿಕ ಕಾನೂನು ಜಾರಿಗೊಳಿಸಲು ಒತ್ತಾಯಿಸಿ ಭಾರತೀಯ ಸಂಚಾರ ನಿಗಮದ ನಾನ್ ಪರ್ಮನೆಂಟ್ ವರ್ಕರ್ಸ್ ಯೂನಿಯನ್ ಸದಸ್ಯರು ನಗರದ ಸಾಗರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಕಳೆದ ಹಲವು ವರ್ಷದಿಂದ ಬಿಎಸ್‌ಎನ್‌ಎಲ್ ಸಂಸ್ಥೆಯಲ್ಲಿ 200ಕ್ಕೂ ಅಧಿಕ ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದಾರೆ. ತಾಂತ್ರಿಕ ಕೆಲಸ ಮಾಡುತ್ತಿದ್ದರೂ ಅವರಿಗೆ ನಿರ್ದಿಷ್ಟ ವೇತನ ನೀಡುತ್ತಿಲ್ಲ.
ಈ ವಿಷಯ ಕುರಿತು ಸಂಸ್ಥೆಯು ಸರಿಯಾಗಿ ಸ್ಪಂದಿಸುತ್ತಿಲ್ಲ. ಕಾರ್ಮಿಕರಿಗೆ ಕನಿಷ್ಠ ವೇತನ ಕೂಲಿ ಜಾರಿಗೊಳಿಸಿಲ್ಲ. ಇಎಸ್‌ಐ, ಇಪಿಎಫ್, ಗುರುತಿನ ಚೀಟಿ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ವೇತನ ನೀಡುತ್ತಿಲ್ಲ: ಬೆಲೆ ಏರಿಕೆಯ ಇಂದಿನ ದಿನಗಳಲ್ಲಿ ಕಾರ್ಮಿಕರು ಜೀವನ ಮಾಡುವುದು ಕಷ್ಟವಾಗಿದೆ. ಗುತ್ತಿಗೆದಾರರೂ ಸಹ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ. ಸೆಪ್ಟಂಬರ್ ತಿಂಗಳಲ್ಲಿ ಹೊಸ ಗುತ್ತಿಗೆ ಕೆಲಸ ಮುಗಿದ ನಂತರ ಗುತ್ತಿಗೆದಾರರು ಕಾರ್ಮಿಕ ಕಾನೂನುಗಳನ್ನು ಉಲ್ಲಂಘಿಸುತ್ತಿದ್ದಾರೆ. ಸಮಸ್ಯೆಯ ಸಂಪೂರ್ಣ ಅರಿವು ಇರುವ ಬಿಎಸ್‌ಎನ್‌ಎಲ್ ಕೂಡಲೇ ಕಾರ್ಮಿಕರ ರಕ್ಷಣೆಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಯೂನಿಯನ್ ಅಧ್ಯಕ್ಷ ಎಸ್.ಎ. ದೇವರಾಜ್, ಕಾರ್ಯದರ್ಶಿಗಳಾದ ರಾಘವೇಂದ್ರ, ಸಂತೋಷ್, ಉಪಾಧ್ಯಕ್ಷ  ಮಧುಸೂದನ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement