ಬಿಇಡಿ ದಾಖಲಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: 2013-14ನೇ ಸಾಲಿನ ಬಿಇಡಿ ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಣಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೂಚನೆ, ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ನವೆಂಬರ್ 21ರಂದು ಇಲಾಖೆಯ ಅಂತರ್ಜಾಲ ತಾಣದಲ್ಲಿ ಉನ್ನತೀಕರಿಸಲಾಗುವುದು. ಅರ್ಹರು ನ. 22ರಿಂದ ಡಿಸೆಂಬರ್ 6ರೊಳಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿವರಗಳಿಗಾಗಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ.
ಅಹವಾಲು ಸ್ವೀಕಾರ
ಶಿವಮೊಗ್ಗ: ಕರ್ನಾಟಕ ಲೋಕಾಯುಕ್ತ ಪೊಲೀಸಸ್ವಿಭಾಗದ ಅಧಿಕಾರಿಗಳು ನವೆಂಬರ್ 22ರಂದು ಬೆಳಿಗ್ಗೆ 11ರಿಂದ 1.30ರವರೆಗೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳ ಕುರಿತು ಆಗುತ್ತಿರುವ ಅನಗತ್ಯ ವಿಳಂಬ, ಮತ್ತಿತರ ಸಮಸ್ಯೆಗಳಿದ್ದಲ್ಲಿ ನಿಗದಿತ ದಿನಾಂಕ, ಸಮಯ ಮತ್ತು ಸ್ಥಳಗಳಲ್ಲಿ ಖುದ್ದಾಗಿ ಹಾಜರಿದ್ದು, ದೂರುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂ.ಪಿ.ನಾಗರಾಜ್ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಸೂಚನೆ
ಶಿವಮೊಗ್ಗ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಶಿವಮೊಗ್ಗ ತಾಲೂಕಿನ ಗಾಜನೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಪೂರೈಸಲು ಪ್ರಸ್ತುತವಿರುವ ಶಿವಮೊಗ್ಗ-ಮುತ್ತಿನಕೊಪ್ಪ ಮಾರ್ಗದಿಂದ 285ಮೀ. ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ.ಈ ಪ್ರಸರಣ ಮಾರ್ಗವು ಗಾಜನೂರಿನ ಮೊರಾರ್ಜಿ ದೇಸಾಯಿ ಶಾಲೆಯ ಸಮೀಪದಿಂದ ಶಾಲೆಯ ಹಿಂಭಾಗದಲ್ಲಿ ನಿರ್ಮಿಸಿರುವ ಗಾಜನೂರಿನ ಹೊಸ ವಿದ್ಯುತ್ ಉಪ ಕೇಂದ್ರಕ್ಕೆ ಹಾದು ಹೋಗಲಿದೆ. ವಿದ್ಯುತ್ಪ್ರ್ಸರಣಾ ಮಾರ್ಗದಲ್ಲಿ ನವೆಂಬರ್ 21ರಂದು ಅಥವಾ ನಂತರದ ದಿನಗಳಲ್ಲಿ ವಿದ್ಯುತ್ ಪ್ರಸರಿಸಲಾಗುವುದು. ಆದ್ದರಿಂದ ಈ ಗ್ರಾಮಗಳ ವ್ಯಾಪ್ತಿಯೊಳಗಿನ ಸಾರ್ವಜನಿಕರು ವಿದ್ಯುತ್ ಮಾರ್ಗದ ಗೋಪುರಗಳಿಗೆ ಜಾನುವಾರು ಕಟ್ಟುವುದಾಗಲೀ, ಗೋಪುರಗಳನ್ನು ಹತ್ತುವುದಾಗಲಿ, ಮರದ ಕೊಂಬೆ ಇತ್ಯಾದಿ ಅಪಾಯಕಾರಿ ವಸ್ತುಗಳನ್ನು ವಿದ್ಯುತ್ ತಂತಿಗೆ ತಗಲುವಂತೆ ಎಸೆಯುವುದಾಗಲಿ ಮಾಡಬಾರದು. ಒಂದುವೇಳೆ ಇಂತಹ ಕೃತ್ಯಗಳನ್ನು ಯಾರಾದರೂ ಎಸಗಿದಲ್ಲಿ ಹಾಗೂ ಅಪಘಾತ ಸಂಭವಿಸಿದಲ್ಲಿ ಆಗುವ ಅನಾಹುತಕ್ಕೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ ಎಂದು ಮೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.