ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಐವರ ಬಂಧನ

Lingaraj Badiger
Updated On : 22 Nov 2013, 11:31 am

ಶಿವಮೊಗ್ಗ: ವೇಶ್ಯಾವಾಟಿಕೆ ನಡೆಸುತ್ತಿದ್ದ ಗೋಪಾಳದ ಮನೆಯೊಂದರ ಮೇಲೆ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ದಾಳಿ ನಡೆಸಿ, ವೇಶ್ಯಾವಾಟಿಕೆಗೆ ಸಹಕರಿಸುತ್ತಿದ್ದ ಮಹಿಳೆಯರನ್ನು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಕೊಲ್ಕತಾ ಮೂಲದ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರೊಬ್ಬರ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್‌ಪಿ ಶಿವಕುಮಾರ್ ಮಾರ್ಗದರ್ಶನದಲ್ಲಿ ಕೋಟೆ ಸರ್ಕಲ್ ಇನ್ಸ್‌ಪೆಕ್ಟರ್ ಜೈರಾಜ್ ಹಾಗೂ ಮಹಿಳಾ ಠಾಣೆ ಇನ್ಸ್‌ಪೆಕ್ಟರ್ ಮಧು ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ. ಪೊಲೀಸರು ದಾಳಿ ನಡೆಸಿದಾಗ ಇಬ್ಬರು ಕೊಲ್ಕತಾ ಮೂಲದ ಯುವತಿಯರು ಹಾಗೂ ವಿದ್ಯಾನಗರದ ಹೇಮಂತ, ನಾರಾಯಣ ಎಂಬುವವರನ್ನು ಬಂಧಿಸಲಾಗಿದ್ದು, ವೇಶ್ಯಾವಾಟಿಕೆ ನಡೆಸುತ್ತಿದ್ದ ಪೂರ್ಣೇಶ್ ಕುಮಾರ ಹಾಗೂ ಇದಕ್ಕೆ ಸಹಕರಿಸುತ್ತಿದ್ದ ಶೋಭಾ ಎಂಬಾಕೆಯ ಮೇಲೆ ಮಹಿಳಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಅನುಮಾನಸ್ಪದ ವ್ಯಕ್ತಿ ಸಾವು
ಶಿವಮೊಗ್ಗ: ವ್ಯಕ್ತಿಯೊಬ್ಬರು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದಲ್ಲಿರುವ ಹಾಯ್ ಹೊಳೆ ಬಳಿ ಗುರುವಾರ ಸಂಜೆ ನಡೆದಿದೆ. ಶಿವಾಜಿ(35)ಮೃತಪಟ್ಟವರು. ಇವರು ಮೂಲತಃ ಉಂಬ್ಳೇಬೈಲು ವಾಸಿಯಾಗಿದ್ದು, ಈತನ ಹೆಂಡತಿ ಗಲಾಟೆ ಮಾಡಿಕೊಂಡು ತನ್ನ ತವರು ಮನೆ ಹಾಯ್ ಹೊಳೆಗೆ ಹೋಗಿದ್ದರು. ಬೇಸತ್ತ ಶಿವಾಜಿ ಗುರುವಾರ ಹೆಂಡತಿಯ ಮನೆಗೆ ಹೋಗಿ ಗಲಾಟೆ ಮಾಡಿದ್ದಾನೆ.
ಈ ಸಂದರ್ಭದಲ್ಲಿ ಸ್ಥಳೀಯರು ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡು ಶಿವಾಜಿ ಸಾವನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತುಂಗಾ ನಗರದಲ್ಲಿ ಪ್ರಕರಣ ದಾಖಲಾಗಿದೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement