ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಜ್ಯೋತಿ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ

Vishwanath S
Updated On : 24 Nov 2013, 3:07 am

ಕ.ಪ್ರ.ವಾರ್ತೆ ಟಿ ಶಿವಮೊಗ್ಗ ಟಿ  ನ.23
ರಾಜ್ಯ ಸರ್ಕಾರಿ ನೌಕರರು ತಮ್ಮ ಅನಾರೋಗ್ಯದ ಸಂದರ್ಭದಲ್ಲಿ ಮಾಡುವ ವೈದ್ಯಕೀಯ ವೆಚ್ಚ ಸರ್ಕಾರದಿಂದ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗದಿರುವ ಹಿನ್ನೆಲೆಯಲ್ಲಿ ನೌಕರರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ತಪ್ಪಿಸಲು ಪೊಲೀಸ್ ಇಲಾಖೆಯಲ್ಲಿ ಜಾರಿಯಲ್ಲಿರುವ ಆರೋಗ್ಯ ಭಾಗ್ಯ ಯೋಜನೆ ಮಾದರಿಯಲ್ಲಿ ಈಗಾಗಲೇ ರೂಪಿಸಲಾಗಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎಲ್. ಭೈರಪ್ಪ ಸರ್ಕಾರವನ್ನು ಒತ್ತಾಯಿಸಿದರು.
ಶನಿವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅದರ ಪರಿಹಾರಕ್ಕೆ ಸರ್ಕಾರವು ಕೈಗೊಳ್ಳಬೇಕಾಗಿರುವ ತುರ್ತು ಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ವೇತನ ವ್ಯತ್ಯಾಸ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನಡುವೆ ಶೇ. 5ರಿಂದ 10ರಷ್ಟು ಮೂಲ ವೇತನದಲ್ಲಿ ವ್ಯತ್ಯಾಸ ಇದೆ. ಈ ವ್ಯತ್ಯಾಸವನ್ನು ಸರಿದೂಗಿಸಿ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಬಟವಾಡೆಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ಅವರು, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ಇಲಾಖೆಗಳ ಅಧಿಕಾರಿಗಳು ಹಾಗೂ ನೌಕರರಿಗೆ ಪ್ರತಿ ಮಾಹೆ ನಿಗದಿತ ದಿನದಂದು ವೇತನ ಬಟವಾಡೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ವರ್ಗಾವಣೆ ಪ್ರಕ್ರಿಯೆ ಅನಿವಾರ್ಯವಾಗಿದೆ. ಆದರೆ ವರ್ಗಾವಣೆಯನ್ನು ನಿಗದಿಪಡಿಸಿದ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಕೇಂದ್ರ ಸಂಘದ ಯೋಗಾನಂದ, ಮನುದೇವ್ ಕುಮಾರ್, ಜಿಲ್ಲಾ ಸಂಘದ ಕಾರ್ಯದರ್ಶಿ ಮೋಹನ್‌ಕುಮಾರ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement