ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ಉಚಿತ ಕನ್ನಡಕ ವಿತರಣೆ

Lingaraj Badiger
Updated On : 26 Nov 2013, 10:41 am

ತೀರ್ಥಹಳ್ಳಿ: ತಾಲೂಕಿನ ದೂರ ಮತ್ತು ಅತೀ ಹಿಂದುಳಿದ ಪ್ರದೇಶ ವ್ಯಾಪ್ತಿಯ ವಿವಿಧೆಡೆ ನಡೆದ ತಜ್ಞ ವೈದ್ಯಕೀಯ ಶಿಬಿರದಲ್ಲಿ ಗುರುತಿಸಲ್ಪಟ್ಟ ಫಲಾನುಭವಿಗಳಿಗೆ ನ.30ರಂದು ತಾಲೂಕಿನ ನಾಲೂರಿನಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎಸ್. ಪ್ರಕಾಶ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ರಕ್ಷಣಾ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ನಾಲೂರು ಹಾಗೂ ಇತರೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ದೂರ ಮತ್ತು ಅತೀ ಹಿಂದುಳಿದ ಪ್ರದೇಶ ವ್ಯಾಪ್ತಿಯ ಗ್ರಾಮವಾದ ನಾಲೂರಿನಲ್ಲಿ ನಡೆದ ತಜ್ಞ ವೈದ್ಯಕೀಯ ಶಿಬಿರದಲ್ಲಿ ಗುರುತಿಸಲ್ಪಟ್ಟ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಗುತ್ತಿದೆ.
ಉಚಿತ ತಪಾಸಣೆ
ಶಿವಮೊಗ್ಗ: ಧನ್ವಂತರಿ ಆಯುರ್ವೇದ ಚಿಕಿತ್ಸಾಲಯ ಮತ್ತು ಸಂಶೋಧನಾ ಕೇಂದ್ರದಲ್ಲಿ ನ. 27ರಂದು ಉಚಿತ ಕಿಡ್ನಿಸ್ಟೋನ್ ತಪಾಸಣೆ ಮತ್ತು ಸಲಹಾ ಶಿಬಿರ ಏರ್ಪಡಿಸಲಾಗಿದೆ.ಶಿಬಿರದ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಕೇಂದ್ರದ ಡಾ. ವೈ.ಬಿ. ಪ್ರಭುದೇವ ತಿಳಿಸಿದ್ದಾರೆ. ವಿವರಗಳಿಗಾಗಿ ಮೊ. 9743458399.
ಕಾಂಗ್ರೆಸ್‌ಗೆ ಆಯ್ಕೆ
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಸಹ ಕಾರ್ಯದರ್ಶಿಯಾಗಿ ಜಫರುಲ್ಲಾ ಷರೀಫ್ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಸಮಿತಿ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಹಾಗೂ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಸೈಯದ್ ವಾಹೀದ್ ಅವರ ಆದೇಶದ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement