ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ದಸಂಸ ಮೈಕೊಡವಿ ನಿಲ್ಲಲಿ

Srinivasa Murthy VN
Updated On : 27 Nov 2013, 11:28 am

ಕ.ಪ್ರ.ವಾರ್ತೆ  ಶಿವಮೊಗ್ಗ  ನ. 26
ನಾಡಿನ ಎಲ್ಲಾ ಚಳುವಳಿಗಳು ಇಂದು ಸಂಕಷ್ಟದಲ್ಲಿವೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಕೊಡವಿ ನಿಲ್ಲಬೇಕಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ಭಾರತಿ ಮುಖ್ಯಸ್ಥ ಡಾ. ಸಣ್ಣರಾಮ ಹೇಳಿದರು.
ಅವರು ಮಂಗಳವಾರ ನಗರದಲ್ಲಿ ನಡೆದ ದಸಂಸ ಶಿವಮೊಗ್ಗ ತಾಲೂಕು ಪದಾಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಸಿ, ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಪ್ರೊ. ಬಿ. ಕೃಷ್ಣಪ್ಪನವರ ತಾತ್ವಿಕ ಚಿಂತನೆಗಳೇ ದಸಂಸ ಮಾರ್ಗದರ್ಶಿ ಸೂತ್ರಗಳಾಗಿವೆ ಎಂದರು.
ಆರೋಪ- ಪ್ರತ್ಯಾರೋಪ: ಸಾಮಾಜಿಕ ಸಂದರ್ಭದ ಒತ್ತಡಗಳಿಂದಾಗಿ ಹುಟ್ಟಿದ ಸಂಘಟನೆ ಮುಖಂಡರು ವಾರಸುದಾರಿಕೆಗೆ ಮುಂದಾದರು. ಚಳುವಳಿಯ ನಾಯಕರು ಬದಲಾದರು ಅವರ ಗುರಿಗಳು ಬದಲಾದವು. ಪರಸ್ಪರ ಆರೋಪ ಪ್ರತ್ಯಾರೋಪ ಅನುಮಾನ ಮೊಳಕೆಯೊಡೆದವು ಎಂದವರು ಹೇಳಿದರು.
ಸಾಗರದ ಸರ್ಕಾರಿ ಪ್ರಥಮ ದರ್ಜೆ ಇಂದಿರಾ ಗಾಂಧಿ ಮಹಿಳಾ ಕಾಲೇಜಿನ ಆಂಗ್ಲ ಪ್ರಾಧ್ಯಾಪಕ ಬಿ.ಎಲ್. ರಾಜು, ಯಗಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಕುಂಸಿ ಉಮೇಶ್, ಸಹ್ಯಾದ್ರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಧ್ಯಾಪಕ ಕೆ. ಚಂದ್ರಪ್ಪ, ವಕೀಲ ಆರ್. ಬಂಗಾರಪ್ಪ, ದಸಂಸ ಜಿಲ್ಲಾ ಸಂಚಾಲಕ ಟಿ.ಎಚ್. ಹಾಲೇಶಪ್ಪ, ತಾಲೂಕು ಸಂಚಾಲಕ ಚಿಕ್ಕಮರಡಿ ರಮೇಶ್ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ದಸಂಸದ ರಾಜ್ಯ ಸಂಘಟನಾ ಸಂಚಾಲಕ ಎಂ. ಗುರುಮೂರ್ತಿ ವಹಿಸಿದ್ದರು.

ಇಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಕುಂಸಿ ಗ್ರಾಮದಲ್ಲಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನ.27ರಂದು ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕುಂಸಿ, ಬಾಳೆಕೊಪ್ಪ, ಆಯನೂರು, ಚೋರಡಿ, ಹಾರ್ನಹಳ್ಳಿ, ರಾಮನಗರ, ತ್ಯಾಜವಳ್ಳಿ, ಕೊನಗವಳ್ಳಿ, ಮಂಡಘಟ್ಟ, ಸಿರಿಗೆರೆ, ಮಲೇಶಂಕರ, ಸೂಗೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂನ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement