ಮಕ್ಕಳ, ಗರ್ಭಿಣಿ, ಬಾಣಂತಿಯರ ಆರೋಗ್ಯ ತಪಾಸಣೆ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಡಿ. 2ರಿಂದ 6ರವರೆಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳ 6 ವರ್ಷದೊಳಗಿನ ಎಲ್ಲಾ ಮಕ್ಕಳ, ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯ ತಪಾಸಣಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಡಿ. 2ರಂದು ಅಂಗನವಾಡಿ ಕೇಂದ್ರಗಳ 6 ವರ್ಷದ ಮಕ್ಕಳ ಆರೋಗ್ಯ ತಪಾಸಣೆ, ಡಿ. 4ರಂದು ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳಿಂದ ಹೊರಗುಳಿದ ಮಕ್ಕಳ ಆರೋಗ್ಯ ತಪಾಸಣೆ, ಡಿ. 6ರಂದು ನಗರ ಪ್ರದೇಶಗಳಲ್ಲಿ ಅಂಗನವಾಡಿ ಮಕ್ಕಳ, ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ತಪಾಸಣೆ ನಡೆಸಲಾಗುವುದು. ಅರ್ಹ ಫಲಾನುಭವಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.