ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಶಿವಮೊಗ್ಗ

ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರ ಪತ್ತೆ

Vishwanath S
Updated On : 1 Dec 2013, 12:54 pm

ಸಾಗರ: ಗುರುವಾರ ಕಾಣೆಯಾಗಿದ್ದ ತಾಲೂಕಿನ ಹೆಗ್ಗೋಡು ಕೇಡಲಸರದ ಪ್ರೌಢಶಾಲೆಯ 9ನೇ ತರಗತಿಯ ಮೂವರು ವಿದ್ಯಾರ್ಥಿನಿಯರನ್ನು ಶನಿವಾರ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು, ಸಾಗರಕ್ಕೆ ಕರೆತರಲಾಗಿದೆ.
ಕೇಡಲಸರ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮುಂಡಿಗೆಸರ ಗ್ರಾಮದ ಸಿಂಧು, ಮಳಲಿ ಗ್ರಾಮದ ಅನುರಾಧ ಹಾಗೂ ಹೈತೂರಿನ ಶ್ಯಾಮಲ ಎಂಬುವವರು ಗುರುವಾರ ಶಾಲೆಯಲ್ಲಿ ನಡೆಯುವ ಪ್ರತಿಭಾ ಕಾರಂಜಿಗೆ ಹೋಗುತ್ತೇವೆ ಎಂದು ಮನೆಯಿಂದ ಹೋದವರು ಮತ್ತೆ ಮನೆಗೆ ಹಿಂದಿರುಗಿ ಬಂದಿರಲಿಲ್ಲ. ಈ ಸಂಬಂಧವಾಗಿ ಶುಕ್ರವಾರ ಪೋಷಕರು ತಮ್ಮ ಮಕ್ಕಳು ನಾಪತ್ತೆಯಾಗಿರುವ ಬಗ್ಗೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮಕ್ಕಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಪಿ.ಜಿ.ಗೆ ಸೇರಲು ಪ್ರಯತ್ನಿಸುತ್ತಿದ್ದ ವಿದ್ಯಾರ್ಥಿನಿಯರನ್ನು ಅಲ್ಲಿನ ಪೊಲೀಸರು ಪತ್ತೆ ಹಚ್ಚಿ ಸಾಗರದ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ.
ಗ್ರಾಮಾಂತರ ಠಾಣೆಯ ಸರ್ಕಲ್ ಇನ್ಸ್‌ಪೆಪೆಕ್ಟರ್ ಹಾಗೂ ಸಿಬ್ಬಂದಿ ಮೂವರು ಬಾಲಕಿಯರನ್ನು ಕರೆತಂದು ಶನಿವಾರ ಅವರ ಪೋಷಕರಿಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement